ಮಂಗಳವಾರ, ಡಿಸೆಂಬರ್ 10, 2019
20 °C

ಮಡಿವಾಳ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿವಾಳ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಆಗ್ರಹ

ಯಾದಗಿರಿ: ‘ಮಡಿವಾಳ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಫೆ. 22ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ರಾಜ್ಯ ಮಡಿವಾಳರ ಸಂಘದ ಜಿಲ್ಲಾಧ್ಯಕ್ಷ ಮಡಿವಾಳಪ್ಪ ಬಿಜಾಸ್ಪೂರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಡಿವಾಳರ ಸಂಘ ರಾಜ್ಯಾಧ್ಯಕ್ಷ ಸಿ. ನಂಜಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ಬೃಹತ್ ಮೆರವಣಿಗೆ ಮೂಲಕ ವಿಧಾನಸೌಧಕ್ಕೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಕಾರ್ಯಕ್ರಮದಲ್ಲಿ ಮಡಿವಾಳ ಗುರುಪೀಠದ ಶಿವಯೋಗಾನಂದ ಪುರಿ ಸ್ವಾಮೀಜಿ, ಚಿತ್ರದುರ್ಗದ ಬಸವ ಮಾಚಿದೇವ ಸ್ವಾಮೀಜಿ, ಮುಕ್ತಾನಂದ ಸ್ವಾಮೀಜಿ ಭಾಗವಹಿಸುವರು.

ಪ್ರೊ. ಅನ್ನಪೂರ್ಣಮ್ಮ ವರದಿಯಲ್ಲಿ ಮಡಿವಾಳರನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆ ಮಾಡಬೇಕು ಎಂದು ಸ್ಪಷ್ಟವಾಗಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಆದರೆ, ಸರ್ಕಾರ ಈ ವರದಿ ಅನ್ವಯ ಕೇಂದ್ರಕ್ಕೆ ಶಿಫಾರಸು ಮಾಡದೇ ವಿಳಂಬ ಮಾಡುತ್ತಿದೆ. ಇದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ‘ಬೆಂಗಳೂರು ಚಲೋ’ ಹಮ್ಮಿಕೊಳ್ಳಲಾಗಿದೆ ಎಂದು ಮಡಿವಾಳಪ್ಪ ಬಿಜಾಸ್ಪೂರ್ ತಿಳಿಸಿದ್ದಾರೆ.

ಈಗಾಗಲೇ ದೇಶದ 17 ರಾಜ್ಯಗಳಲ್ಲಿ ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲಾಗಿದೆ. ತೆಲಂಗಾಣ, ಆಂಧ್ರ  ಮತ್ತು ಮಧ್ಯಪ್ರದೇಶ ರಾಜ್ಯಗಳೂ ಶಿಫಾರಸು ಮಾಡಿವೆ. ರಾಜ್ಯದಲ್ಲಿ ಮಾತ್ರ ಈ ಪ್ರಯತ್ನ ಇನ್ನೂ ಆಗಿಲ್ಲ. ಆದ್ದರಿಂದ, ಈ ಹೋರಾಟ ರೂಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)