ಭಾನುವಾರ, ಡಿಸೆಂಬರ್ 8, 2019
25 °C

ಶಿಕ್ಷಕಿ, ಮಗಳ ಮೇಲೆ ಅತ್ಯಾಚಾರ ಎಸಗುವುದಾಗಿ ಬೆದರಿಕೆ: ಏಳನೇ ತರಗತಿ ವಿದ್ಯಾರ್ಥಿ ಅಮಾನತು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಶಿಕ್ಷಕಿ, ಮಗಳ ಮೇಲೆ ಅತ್ಯಾಚಾರ ಎಸಗುವುದಾಗಿ ಬೆದರಿಕೆ: ಏಳನೇ ತರಗತಿ ವಿದ್ಯಾರ್ಥಿ ಅಮಾನತು

ಗುರುಗ್ರಾಮ: ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಧ್ಯಾರ್ಥಿಯೊಬ್ಬ ಶಾಲಾ ಶಿಕ್ಷಕಿ ಹಾಗೂ ಅವರ ಮಗಳ ಮೇಲೆ ಅತ್ಯಾಚಾರ ಎಸಗುವುದಾಗಿ ಬೆದರಿಕೆ ಹಾಕಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಯನ್ನು ಬುಧವಾರ ಅಮಾನತು ಮಾಡಿದೆ.

ಮತ್ತೊಂದು ಪ್ರಕರಣದಲ್ಲಿ, ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಜತೆ ರಾತ್ರಿ ಊಟ(ಕ್ಯಾಂಡಲ್‌ ಲೈಟ್‌ ಡಿನ್ನರ್‌) ಹಾಗೂ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಆಹ್ವಾನಿಸಿದ್ದ ಎಂದು ಶಿಕ್ಷಕಿಯೊಬ್ಬರು ದೂರು ನೀಡಿದ್ದರು. ಈ ಎರಡು ಘಟನೆಗಳು ವಾರದ ಹಿಂದೆ ನಡೆದಿವೆ.

7ನೇ ತರಗತಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ್ದು, ತನಿಖೆಗೆ ಒಳಪಡಿಸಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಶಕುಂತಲಾ ಧೌಲ್‌, ‘ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಶಾಲೆಗಳ ಆಡಳಿತ ಮಂಡಳಿಗೆ ತನಿಖೆ ನಡೆಸುವಂತೆ ನೋಟಿಸ್‌ ನೀಡಲಾಗಿದೆ. ತನಿಖೆಯ ಬಳಿಕ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಸಲಾಗುತ್ತದೆ’ ಎಂದು ತಿಳಿಸಿದ್ದಾರೆ.

‘ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಬಳಸುವ ಸಾಮಾಜಿಕ ಮಾಧ್ಯಮಗಳು ಚಟುವಟಿಕೆಗಳ ಕುರಿತು ಮೇಲ್ವಿಚಾರಣೆ ನಡೆಸಬೇಕು. ಜತೆಗೆ ಅಂತರ್ಜಾಲ ಬಳಸುವ ವಿದ್ಯಾರ್ಥಿಗಳ ನಡವಳಿಕೆ ಮೇಲೆ ನಿಗಾ ವಹಿಸಬೇಕು’ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರತಿಕ್ರಿಯಿಸಿ (+)