ಶಿವರಾತ್ರೀಶ್ವರ ಪ್ರಶಸ್ತಿಗೆ ಕೃತಿ ಆಹ್ವಾನ

6

ಶಿವರಾತ್ರೀಶ್ವರ ಪ್ರಶಸ್ತಿಗೆ ಕೃತಿ ಆಹ್ವಾನ

Published:
Updated:

ಮೈಸೂರು: ಜೆಎಸ್ಎಸ್ ಮಹಾವಿದ್ಯಾಪೀಠದ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ವತಿಯಿಂದ ನೀಡಲಾಗುವ ‘ಶಿವರಾತ್ರೀಶ್ವರ ಪ್ರಶಸ್ತಿ’ಗೆ ಕೃತಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ₹ 25 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ.

ವೀರಶೈವ ಅಥವಾ ಲಿಂಗಾಯತ ಧರ್ಮ, ಸಾಹಿತ್ಯ, ಇತಿಹಾಸ, ಕಲೆ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ 2017ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಕೃತಿಗೆ ಪ್ರಶಸ್ತಿ ನೀಡಲಾಗುತ್ತದೆ. ಎರಡು ಪ್ರತಿಗಳನ್ನು ನಿರ್ದೇಶಕರು, ಪ್ರಕಟಣಾ ವಿಭಾಗ, ಜೆಎಸ್ಎಸ್ ಮಹಾವಿದ್ಯಾಪೀಠ, ಶಿವರಾತ್ರಿ ರಾಜೇಂದ್ರ ವೃತ್ತ, ಮೈಸೂರು– 570 004 ವಿಳಾಸಕ್ಕೆ ಮಾರ್ಚ್ 31ರೊಳಗೆ ಕಳುಹಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry