ಪುಟ್ಟಣ್ಣಯ್ಯ ಅಂತ್ಯ ಸಂಸ್ಕಾರ ಇಂದು

7

ಪುಟ್ಟಣ್ಣಯ್ಯ ಅಂತ್ಯ ಸಂಸ್ಕಾರ ಇಂದು

Published:
Updated:
ಪುಟ್ಟಣ್ಣಯ್ಯ ಅಂತ್ಯ ಸಂಸ್ಕಾರ ಇಂದು

ಮಂಡ್ಯ: ರೈತ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ಅಂತ್ಯ ಸಂಸ್ಕಾರವನ್ನು ಯಾವುದೇ ಧಾರ್ಮಿಕ ವಿಧಿವಿಧಾನದಿಂದ ಮಾಡದೆ ಹೋರಾಟ ಗೀತೆಯೊಂದಿಗೆ ಫೆ. 22 ರಂದು ಬೆಳಿಗ್ಗೆ 10.30ಕ್ಕೆ ಪಾಂಡವಪುರ ತಾಲ್ಲೂಕಿನ ಸ್ವಗ್ರಾಮ ಕ್ಯಾತನಹಳ್ಳಿಯಲ್ಲಿ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ, ಹಸಿರು ಸೇನೆ ತಿಳಿಸಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬೊಗಸೆ ಮಣ್ಣು ಹಿಡಿದು ಸಾವಿರಾರು ರೈತ ಹೋರಾಟಗಾರರು ಬರಲಿದ್ದಾರೆ. ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಯೋಗೇಂದ್ರ ಯಾದವ್, ಉತ್ತರ ಭಾರತದ ರೈತ ನಾಯಕ ರಾಕೇಶ್ ಟಿಕಾಯಿತ್ ಪಾಲ್ಗೊಳ್ಳಲಿದ್ದಾರೆ.

ಫೆ. 28ರಂದು ‘ತಿಥಿಬಿಡಿ ಸಸಿನೆಡಿ’ ಕಾರ್ಯಕ್ರಮ ಹಾಗೂ ನಾಟಕ ಪ್ರದರ್ಶನದ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry