ಇಂದು ಕ್ವಾರಿ ಮಾಲಿಕರ ಪ್ರತಿಭಟನೆ

5

ಇಂದು ಕ್ವಾರಿ ಮಾಲಿಕರ ಪ್ರತಿಭಟನೆ

Published:
Updated:

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ 22ರಂದು  ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಫೆಡರೇಷನ್‌ ಆಫ್‌ ಕರ್ನಾಟಕ ಕ್ವಾರಿ ಮತ್ತು ಸ್ಟೋನ್‌ ಕ್ರಷರ್‌ ಓನರ್ಸ್‌ ಅಸೋಸಿಯೇಷನ್ಸ್‌ ತಿಳಿಸಿದೆ.

ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ಸ್‌ನ ಸಂಘಟನಾ ಕಾರ್ಯದರ್ಶಿ ಭಾಸ್ಕರ್, ‘ಕಳೆದ ವರ್ಷ ಪ್ರತಿಭಟನೆ ನಡೆಸಿದ್ದೆವು. ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಈವರೆಗೂ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಈ ಬಾರಿಯೂ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರಾಜ್ಯದಾದ್ಯಂತ ಕ್ರಷರ್‌ಗಳನ್ನು ಸ್ಥಗಿತಗೊಳಿಸಿ ಉಗ್ರ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಸಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry