ಬುಧವಾರ, ಡಿಸೆಂಬರ್ 11, 2019
23 °C

250 ಮಂದಿಗೆ ತಾತ್ಕಾಲಿಕ ಹಕ್ಕುಪತ್ರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

250 ಮಂದಿಗೆ ತಾತ್ಕಾಲಿಕ ಹಕ್ಕುಪತ್ರ ವಿತರಣೆ

ಬೆಂಗಳೂರು: ಬ್ಯಾಟರಾಯನಪುರ ಕ್ಷೇತ್ರದ ಸೊಣ್ಣಪ್ಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ 250 ಜನರಿಗೆ ಕೃಷಿ ಸಚಿವ ಕೃಷ್ಣ ಬೈರೇಗೌಡ ತಾತ್ಕಾಲಿಕ ಹಕ್ಕುಪತ್ರ ವಿತರಿಸಿದರು.

ಸಾವಿರಕ್ಕಿಂತ ಹೆಚ್ಚಿನ ಜನರು ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡು 30 ವರ್ಷಗಳಿಂದ ವಾಸವಾಗಿದ್ದಾರೆ. ಅಧಿಕೃತ ದಾಖಲೆಗಳಿಲ್ಲದೆ ಪ್ರತಿದಿನ ಆತಂಕದಲ್ಲಿ ಜೀವನ ನಡೆಸುತ್ತಿದ್ದಾರೆ. ಇಂತಹವರ ಸಮೀಕ್ಷೆ ನಡೆಸಿದ್ದು, ಮೊದಲ ಹಂತದಲ್ಲಿ ಹಕ್ಕುಪತ್ರ ವಿತರಿಸಲಾಗಿದೆ. ಉಳಿದವರಿಗೆ ಶೀಘ್ರದಲ್ಲೇ ಹಕ್ಕುಪತ್ರ ನೀಡಲಾಗುತ್ತದೆ ಎಂದು ಸಚಿವರು ಹೇಳಿದರು.

ಇದೇ ವೇಳೆ, ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿದರು. ಸುಭಾಷ್‌ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದರು. 1,000 ಮಂದಿಗೆ ನೀರಿನ ಕ್ಯಾನ್‌ಗಳನ್ನು ವಿತರಿಸಿದರು.

ಪ್ರತಿಕ್ರಿಯಿಸಿ (+)