‘ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ’

7

‘ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ’

Published:
Updated:

ಸಿಂಧನೂರು: ಶಿಕ್ಷಣ ಪಡೆಯುವುದು ಪ್ರತಿಯೊಬ್ಬರ ಹಕ್ಕು. ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆಂದರೆ ಶಿಕ್ಷಣ ಅವಶ್ಯ. ಶಿಕ್ಷಣದಿಂದ ಮಾತ್ರ ನವ ಸಮಾಜ ನಿರ್ಮಾಣ ಸಾಧ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ರಿಹಾನ ಸುಲ್ತಾನ ಸಲಹೆ ನೀಡಿದರು.

ನಗರದ ಕರ್ನಾಟಕ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾಯ ಮತ್ತು ಹೆಲ್ಮೆಟ್ ಕಡ್ಡಾಯ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಿ.ವಿ.ಸನತ್ ಮಾತನಾಡಿ, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ನ್ನು ಬಳಸುತ್ತಿಲ್ಲ. ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇದರಿಂದ ಅಪಘಾತವಾದಾಗ ಪ್ರಾಣಾಪಾಯ ಸಂಭವಿಸುವುದಿಲ್ಲ ಎಂದು ಸಲಹೆ ನೀಡಿದರು. ಸಾಮಾಜಿಕ ನ್ಯಾಯ ಮತ್ತು ಹೆಲ್ಮೆಟ್ ಕುರಿತು ಭೀಮೇಶಪ್ಪ ವಕೀಲರು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮಹಾಂತೇಶ ಜಿ.ಭೂಸಗೋಳ್, ರವಿಕುಮಾರ ಕೆ., ಕರ್ನಾಟಕ ಕಾಲೇಜಿನ ಅಧ್ಯಕ್ಷ ಶಂಕರ ಗುರಿಕಾರ ಮಾತನಾಡಿದರು.

ವಕೀಲರ ಸಂಘದ ಕಾರ್ಯದರ್ಶಿ ವಿರುಪಣ್ಣ ಧುಮತಿ, ಕಾಲೇಜಿನ ಪ್ರಾಚಾರ್ಯ ಸಂಗಮೇಶ ಇದ್ದರು. ವಕೀಲರ ಸಂಘದ ಅಧ್ಯಕ್ಷ ಜೆ.ರಾಯಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಖೈರುನಬೀ ಪ್ರಾರ್ಥಿಸಿದರು. ಹುಲಿಗೇಶ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry