3

ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ

Published:
Updated:

ಸಂತೇಮರಹಳ್ಳಿ: ಸಮೀಪದ ಕೆಂಪನಪುರ ಗ್ರಾಮದ ಸರ್ಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ವಾರ್ಷಿಕೋತ್ಸವ ಆಚರಿಸಲಾಯಿತು.

ಗ್ರಾಮಪಂಚಾಯಿತಿ ಅಧ್ಯಕ್ಷ ಕೆ.ಎಂ.ಗುರುಸಿದ್ದಪ್ಪ ಮಾತನಾಡಿ, ಈಚಿನ ದಿನಗಳಲ್ಲಿ ಪೋಷಕರು ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರಕುತ್ತಿಲ್ಲ ಎಂಬ ನೆಪಹೇಳಿ ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುತ್ತಿದ್ದಾರೆ. ಆದರೆ, ಸರ್ಕಾರಿ ಶಾಲೆಗಳಲ್ಲೂ ಅನೇಕ ಸೌಲಭ್ಯಗಳನ್ನು ನೀಡುವ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಸೌಲಭ್ಯಗಳ ಕುರಿತು ಪೋಷಕರಿಗೆ ಶಿಕ್ಷಕರು ಮಾಹಿತಿ ನೀಡಬೇಕು ಎಂದು ತಿಳಿಸಿದರು.

ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ನಂತರ ವಿದ್ಯಾರ್ಥಿಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಬಸಮ್ಮಣ್ಣಿ, ಗ್ರಾಮಪಂಚಾಯಿತಿ ಸದಸ್ಯ ದೇವೇಂದ್ರ, ಪ್ರಭುಸ್ವಾಮಿ, ಮುಖ್ಯಶಿಕ್ಷಕ ರೇವಣ್ಣ, ಶಿಕ್ಷಕರಾದ ಸಿ.ಎನ್.ಮಹೇಶ್, ಸಿ.ಮಲ್ಲಪ್ಪ, ಆರ್. ದತ್ತೇಗೌಡ, ಪ್ರಮಿಳಾಭಾಯಿ, ಅಶ್ವಿನಿ, ಆಶಾ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry