ಬುಧವಾರ, ಡಿಸೆಂಬರ್ 11, 2019
26 °C

ಬಾಣಾವರ ಮೀಸಲು ಅರಣ್ಯದಲ್ಲಿ ಕಾಳ್ಗಿಚ್ಚು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಣಾವರ ಮೀಸಲು ಅರಣ್ಯದಲ್ಲಿ ಕಾಳ್ಗಿಚ್ಚು

ಕುಶಾಲನಗರ (ಕೊಡಗು ಜಿಲ್ಲೆ): ಬಾಣಾವರ ಮೀಸಲು ಅರಣ್ಯ ಪ್ರದೇಶದ ತೇಗದ ತೋಪಿನಲ್ಲಿ ಗುರುವಾರ ಕಾಳ್ಗಿಚ್ಚು ಕಾಣಿಸಿಕೊಂಡು 25 ಎಕರೆಗಳಷ್ಟು ಅರಣ್ಯ ಭಸ್ಮವಾಗಿದೆ.

ಆಲದಮರ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ ಕಾಣಿಸಿಕೊಂಡ ಬೆಂಕಿ ಸಂಜೆ ವೇಳೆಗೆ ಗಾಳಿ ರಭಸಕ್ಕೆ ಇಡೀ ಅರಣ್ಯವನ್ನೇ ವ್ಯಾಪಿಸಿದೆ.

ಒಣಗಿದ್ದ ಗಿಡಗಂಟಿಗಳು ಹಾಗೂ ಅಮೂಲ್ಯ ಮರಗಳು ಬೆಂಕಿಗೆ ಆಹುತಿಯಾಗಿವೆ. ತಕ್ಷಣವೇ ಅರಣ್ಯ ಸಿಬ್ಬಂದಿ ಬೆಂಕಿ ನಂದಿಸುವ ಯತ್ನ ಮಾಡಿದರೂ ಅದು ಸಾಧ್ಯವಾಗಿಲ್ಲ. ಕುಶಾಲನಗರ ಮತ್ತು ಸೋಮವಾರಪೇಟೆ ಅಗ್ನಿಶಾಮಕ ಸಿಬ್ಬಂದಿ, ಹೆಚ್ಚುವರಿ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದು ರಾತ್ರಿಯ ವೇಳೆಗೆ ಬೆಂಕಿ ಹತೋಟಿಗೆ ತರುವಲ್ಲಿ ಯಶಸ್ವಿಯಾದರು.

ಪ್ರತಿಕ್ರಿಯಿಸಿ (+)