ಕಾವೇರಿ: ಮೋದಿ ಭೇಟಿಗೆ ನಿಯೋಗ

7

ಕಾವೇರಿ: ಮೋದಿ ಭೇಟಿಗೆ ನಿಯೋಗ

Published:
Updated:

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ನೇತೃತ್ವದ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದೆ.

ಸರ್ವ ಪಕ್ಷ ಮುಖಂಡರು, ರೈತರು ಹಾಗೂ ಸಂಸದರು ನಿಯೋಗದಲ್ಲಿ ತೆರಳಲು ಗುರುವಾರ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡಿಗೆ ನೀಡಬೇಕಿರುವ ನೀರಿನ ಪ್ರಮಾಣವನ್ನು ಕಡಿಮೆ ಮಾಡಿ ಸುಪ್ರೀಂಕೋರ್ಟ್‌ ಈಚೆಗೆ ತೀರ್ಪು ನೀಡಿತ್ತು. ಈ ತೀರ್ಪಿನ ಬಗ್ಗೆ ಪ್ರಧಾನಿ ಜೊತೆ ಚರ್ಚಿಸುವುದು ಈ ಭೇಟಿಯ ಮುಖ್ಯ ಉದ್ದೇಶ.

ಇದರ ಜೊತೆಗೆ, ನ್ಯಾಯಾಲಯವು ತೀರ್ಪು ನೀಡಿರುವಂತೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಹಾಗೂ ಕಾವೇರಿ ನಿರ್ವಹಣಾ ನಿಗಮ ಸ್ಥಾಪನೆಗೆ ಪ್ರಧಾನಿ ಮೋದಿ ಅವರನ್ನು ಕೋರಲು ಸಭೆ ನಿರ್ಧರಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry