ಸೋಮವಾರ, ಡಿಸೆಂಬರ್ 9, 2019
21 °C
ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಮನವಿ

ಎಸ್‌ಸಿ ಪಟ್ಟಿಗೆ ಸೇರಿಸಲು ಮಡಿವಾಳರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಸ್‌ಸಿ ಪಟ್ಟಿಗೆ ಸೇರಿಸಲು ಮಡಿವಾಳರ ಆಗ್ರಹ

ಬೆಂಗಳೂರು: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಡಿವಾಳರ ಸಂಘದ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ‍್ರತಿಭಟನೆ ನಡೆಸಿದರು.

ಸಂಘದ ಅಧ್ಯಕ್ಷ ಸಿ.ನಂಜಪ್ಪ, ‘ರಾಜ್ಯದಲ್ಲಿ ಮಡಿವಾಳ ಸಮುದಾಯದ 18 ಲಕ್ಷ ಮಂದಿ ಇದ್ದಾರೆ. ಅವರೆಲ್ಲರೂ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಅತ್ಯಂತ ಕೆಳಸ್ತರದಲ್ಲಿದ್ದಾರೆ. ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ, ಈ ಸಮುದಾಯವನ್ನು ಎಸ್‌ಸಿ ಪಟ್ಟಿಗೆ ಸೇರಿಸಬೇಕು’ ಎಂದರು.

‘18 ರಾಜ್ಯಗಳಲ್ಲಿ ಹಾಗೂ 5 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ ಸಮುದಾಯವನ್ನು ಎಸ್‌ಸಿ ಪಟ್ಟಿಗೆ ಸೇರಿಸಲಾಗಿದೆ. ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸಾಂವಿಧಾನಿಕವಾಗಿ ಅವಕಾಶ ಒದಗಿಸಲಾಗಿದೆ. ರಾಜ್ಯದಲ್ಲೂ ಅದೇ ಮಾದರಿಯಲ್ಲಿ ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.

‘ಮಡಿವಾಳರ ಸ್ಥಿತಿಗತಿ ಬಗ್ಗೆ ಅಧ್ಯಯನ ನಡೆಸಿ ಡಾ.ಅನ್ನಪೂರ್ಣಮ್ಮ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಆ ವರದಿಯು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರ ಬಳಿ ಇದೆ. ವರದಿ ಜಾರಿಗೊಳಿಸಲು ಸಚಿವರು ಬಿಡುತ್ತಿಲ್ಲ’ ಎಂದು ಕಿಡಿಕಾರಿದರು.

ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ‘ಬೇಡಿಕೆಗಳ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಜತೆ ಮಾತನಾಡುತ್ತೇನೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದನ್ನು ಕೈಬಿಡಿ’ ಎಂದು ಪ್ರತಿಭಟನಾಕಾರರ ಮನವೊಲಿಸಿದರು.

ಪ್ರತಿಕ್ರಿಯಿಸಿ (+)