ಭಾನುವಾರ, ಡಿಸೆಂಬರ್ 8, 2019
24 °C

ಕಡತಗಳಿಗೆ ಪೆಟ್ರೋಲ್ ಎರಚಿ ದರ್ಪ ತೋರಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಪೊಲೀಸರಿಗೆ ಶರಣು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಕಡತಗಳಿಗೆ ಪೆಟ್ರೋಲ್ ಎರಚಿ ದರ್ಪ ತೋರಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಪೊಲೀಸರಿಗೆ ಶರಣು

ಬೆಂಗಳೂರು:‌‌ ಬಿಬಿಎಂಪಿ ಕಚೇರಿಯಲ್ಲಿ ಕಡತಗಳ ಮೇಲೆ ಪೆಟ್ರೋಲ್ ಎರಚಿದ ಬೆಂಕಿ ಹಚ್ಚಲು ಯತ್ನಿಸಿ, ದರ್ಪ ತೋರಿದ್ದ ಕಾಂಗ್ರೆಸ್‌ನ ಕೆ.ಆರ್‌.ಪುರ ಬ್ಲಾಕ್‌ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ ಪೊಲೀಸರಿಗೆ ಶರಣಾಗಿದ್ದಾರೆ.

ವಿವಾದಿತ ಜಮೀನಿಗೆ ಖಾತೆ ಮಾಡಿಕೊಡದ ಕಾರಣಕ್ಕೆ ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ದಾಂದಲೆ ನಡೆಸಿದ್ದ ನಾರಾಯಣಸ್ವಾಮಿ, ದಾಖಲೆಗಳ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲು ಯತ್ನಿಸಿದ್ದರು.

ಕೆ.ಆರ್.ಪುರ ಶಾಸಕ ಬೈರತಿ ಬಸವರಾಜು ಅವರ ಆಪ್ತರಾಗಿರುವ ನಾರಾಯಣಸ್ವಾಮಿ, ಫೆ.16ರ ಬೆಳಿಗ್ಗೆ ಕಚೇರಿಗೆ ನುಗ್ಗಿ ಗಲಾಟೆ ಮಾಡಿದ್ದರು. ಅದನ್ನು ಯಾರೋ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ವಿಡಿಯೊ ವೈರಲ್ ಆಗಿತ್ತು. ಈ ಸಂಬಂಧ ಪಾಲಿಕೆಯ ಪ್ರಭಾರ ಕಂದಾಯ ಅಧಿಕಾರಿ ಸತೀಶ್ ಕುಮಾರ್ ರಾಮಮೂರ್ತಿನಗರ ಠಾಣೆಗೆ ದೂರು ಕೊಟ್ಟಿದ್ದರು. ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ಆರೋಪಿ ಮೊಬೈಲ್ ಸ್ವಿಚ್ಡ್‌ಆಫ್ ಮಾಡಿಕೊಂಡು ಪರಾರಿಯಾಗಿದ್ದ.

* ಇವನ್ನೂ ಓದಿ...

* ಪಾಲಿಕೆ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡನ ದರ್ಪ

ಪ್ರತಿಕ್ರಿಯಿಸಿ (+)