ಉತ್ತರ ಪ್ರದೇಶ: 18 ವರ್ಷದ ಮಹಿಳೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

7

ಉತ್ತರ ಪ್ರದೇಶ: 18 ವರ್ಷದ ಮಹಿಳೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Published:
Updated:
ಉತ್ತರ ಪ್ರದೇಶ: 18 ವರ್ಷದ ಮಹಿಳೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಊನಾ: 18 ವರ್ಷ ವಯಸ್ಸಿನ ಮಹಿಳೆಗೆ ನಡು ರಸ್ತೆಯಲ್ಲಿ ದುಷ್ಕರ್ಮಗಳು ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಸತ್ನಿ ಬಾಲಾ ಖೇಡಾ ಗ್ರಾಮದಲ್ಲಿ ನಡೆದಿದೆ.

ಮಹಿಳೆ ಗುರುವಾರ ಮನೆಯಿಂದ ಬೈಸಿಕಲ್‌ನಲ್ಲಿ ಮಾರುಕಟ್ಟೆಗೆ ತೆರಳಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಗಳು ಸುಲಭವಾಗಿ ಬೆಂಕಿ ಹೊತ್ತಿಕೊಳ್ಳಬಲ್ಲ ದ್ರವನ್ನು ಮಹಿಳೆ ಮೇಲೆ ಎರಚಿ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪುಷ್ಪಾಂಜರಿ ಮತ್ತು ಇನ್‌ಸ್ಪೆಕ್ಟರ್‌ ಜನರಲ್‌(ವಲಯ) ಸುಜಿತ್‌ ಪಾಂಡೆ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಿಳೆಯ ಕುಟುಂಬದವರು ನೀಡಿದ ದೂರಿನನ್ವಯ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಠಾಣೆಯ ಅಧಿಕಾರಿ ಉತ್ತರ್‌ ಸಿಂಗ್‌ ರಾಥೋಡ್‌ ತಿಳಿಸಿದ್ದಾರೆ. 

ಮರಣೋತ್ತರ ಪರೀಕ್ಷೆಯ ಬಳಿಕ ಹೆಚ್ಚಿನ ವಿವರಗಳು ಲಭ್ಯವಾಗಲಿವೆ ಎಂದು ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry