ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಲೂ ಜಾಮೀನು ಅರ್ಜಿ ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌

Last Updated 23 ಫೆಬ್ರುವರಿ 2018, 13:36 IST
ಅಕ್ಷರ ಗಾತ್ರ

ರಾಂಚಿ: ಮಾಜಿ ಮುಖ್ಯಮಂತ್ರಿ, ಬಹುಕೋಟಿ ಮೇವು ಹಗರಣದ ದೋಷಿ ಲಾಲೂ ಪ್ರಸಾದ್‌ ಯಾದವ್‌ ಜಾಮೀನು ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು  ಜಾರ್ಖಂಡ್‌ ರಾಜ್ಯ ಹೈಕೋರ್ಟ್‌ ತಿರಸ್ಕರಿಸಿದೆ.

ಅರ್ಜಿ ತಿರಸ್ಕರಿಸಿದ ನ್ಯಾಯಮೂರ್ತಿ ಅಪರೇಶ್‌ ಕುಮಾರ್‌ ಸಿಂಗ್‌, ‘ಹಗರಣ ನಡೆದ ಅವಧಿಯಲ್ಲಿ ಲಾಲೂ ಪ್ರಸಾದ್‌ ಯಾದವ್‌ ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹಗರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯೂ ಲಾಲೂಗೆ ತಿಳಿದಿತ್ತು. ಹಾಗಾಗಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ನ್ಯಾಯಾಲಯದ ಸಹಮತವಿಲ್ಲ’ ಎಂದು ಹೇಳಿದ್ದಾರೆ.

ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 2017ರ ಡಿಸೆಂಬರ್ 23 ರಂದು ಲಾಲು ಪ್ರಸಾದ್‌ರನ್ನು ದೋಷಿ ಎಂದು ಪ್ರಕಟಟಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯ, ಮೂರುವರೆ ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ಆರ್‌ಜೆಡಿ ಪಕ್ಷದ ಅಧ್ಯಕ್ಷರಾಗಿರುವ ಲಾಲೂ ‌ತೀರ್ಪು ಪ್ರಕಟವಾದಾಗಿನಿಂದ ಇಲ್ಲಿನ ಬಿರ್ಸಾ ಮುಂಡಾ ಜೈಲಿನಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT