ಅನುಭವ ಮಂಟಪಕ್ಕೆ ₹100 ಕೋಟಿ ಬಿಡುಗಡೆ

7

ಅನುಭವ ಮಂಟಪಕ್ಕೆ ₹100 ಕೋಟಿ ಬಿಡುಗಡೆ

Published:
Updated:

ಬೆಂಗಳೂರು: ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ₹100 ಕೋಟಿ ಅನುದಾನ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದರು.

ವಿಧಾನಸಭೆಯಲ್ಲಿ ಬಜೆಟ್‌ ಚರ್ಚೆಗೆ ಉತ್ತರಿಸಿದ ಅವರು, ಕೊನೆಯ ಕ್ಷಣದಲ್ಲಿ ಬಿಜೆಪಿ ಸದಸ್ಯರ ಧರಣಿ ನಡುವೆ ಈ ವಿಷಯ ಪ್ರಕಟಿಸಿದರು.

ಕಳೆದ ಸೆಪ್ಟೆಂಬರ್‌ನಲ್ಲಿ ನೇಮಿಸಲಾಗಿದ್ದ ತಜ್ಞರ ಸಮಿತಿ ₹604 ಕೋಟಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry