ಸಿಇಟಿ ಬರೆಯಲು ಅನುಮತಿ: ಮೇಲ್ಮನವಿ ಸಲ್ಲಿಕೆ

7

ಸಿಇಟಿ ಬರೆಯಲು ಅನುಮತಿ: ಮೇಲ್ಮನವಿ ಸಲ್ಲಿಕೆ

Published:
Updated:

ಬೆಂಗಳೂರು: ಸಾಗರೋತ್ತರ ಭಾರತೀಯ ನಾಗರಿಕರು (ಒಸಿಐ) 2018ರ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲು ಅನುಮತಿ ನೀಡುವಂತೆ ನಿರ್ದೇಶಿಸಿರುವ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.

ಈ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್‌.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮ ಪ್ರಸಾದ್‌ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಶುಕ್ರವಾರ ಸಲ್ಲಿಸಿದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎ.ಎಸ್‌.ಪೊನ್ನಣ್ಣ, ‘ಇಂದೇ ಪ್ರಕರಣದ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ಪ್ರತಿವಾದಿ ವಿದ್ಯಾರ್ಥಿಗಳಿಗೆ ನೋಟಿಸ್‌ ಜಾರಿಗೆ ಆದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿದೆ.

‘ಏಕಸದಸ್ಯ ನ್ಯಾಯಪೀಠದ ಆದೇಶದಿಂದ ಸಬ್ಸಿಡಿ ದರದ ಸರ್ಕಾರಿ ಸೀಟುಗಳು ಒಸಿಐ ವಿದ್ಯಾರ್ಥಿಗಳ ಪಾಲಾಗಿ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಆದ್ದರಿಂದ ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶವನ್ನು ರದ್ದುಗೊಳಿಸಬೇಕು’ ಎಂಬುದು ಸರ್ಕಾರದ ಕೋರಿಕೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry