ಶುಕ್ರವಾರ, ಡಿಸೆಂಬರ್ 13, 2019
27 °C

ಸರಣಿ ಅಪಘಾತ: ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರಣಿ ಅಪಘಾತ: ಇಬ್ಬರ ಸಾವು

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರ ಟಿ.ಬೇಗೂರು ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತುಮಕೂರಿನ ಶ್ರೀನಗರ ನಿವಾಸಿಗಳಾದ ರಾಕೇಶ್‌ (28), ಕೆಂಪರಾಜು (35) ಮೃತರು. ತುಮಕೂರು ಕಡೆ

ಯಿಂದ ಬೆಂಗಳೂರಿನತ್ತ ಅವರು ಕಾರಿನಲ್ಲಿ ಹೋಗುವಾಗ ಅವಘಡ ಸಂಭವಿಸಿದೆ.

ಎದುರಿನಲ್ಲಿ ಹೋಗುತ್ತಿದ್ದ ಖಾಸಗಿ ಬಸ್‌ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರು. ಆಗ ಕಾರಿನ ಮೇಲೆ ನಿಯಂತ್ರಣ ಕಳೆದುಕೊಂಡ ರಾಕೇಶ್‌ ಬಸ್‌ಗೆ ಗುದ್ದಿಸಿದ್ದಾರೆ. ಅದೇ ಸಂದರ್ಭದಲ್ಲಿ ಹಿಂದಿನಿಂದ ವೇಗವಾಗಿ ಬಂದ ಲಾರಿ, ಕಾರಿಗೆ ಗುದ್ದಿದೆ ಎಂದು ಸಂಚಾರ ಪೊಲೀಸರು ತಿಳಿಸಿದರು.

ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡಿದ ಆರೋಪದಡಿ ಬಸ್ ಹಾಗೂ ಲಾರಿ ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದರು.

ಪ್ರತಿಕ್ರಿಯಿಸಿ (+)