ಇಂದು ನಗರದ 4 ಇಂದಿರಾ ಕ್ಯಾಂಟೀನ್‌ಗಳಿಗೆ ಚಾಲನೆ

7

ಇಂದು ನಗರದ 4 ಇಂದಿರಾ ಕ್ಯಾಂಟೀನ್‌ಗಳಿಗೆ ಚಾಲನೆ

Published:
Updated:

ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಕಡೆ ನಿರ್ಮಾಣವಾಗಿರುವ 4 ಇಂದಿರಾ ಕ್ಯಾಂಟೀನ್‌ಗಳು ಶನಿವಾರ (ಫೆ.24) ಸಂಜೆ 4 ಗಂಟೆಗೆ ಉದ್ಘಾಟನೆಗೊಳ್ಳಲಿವೆ. ಸಚಿವ ಟಿ.ಬಿ.ಜಯಚಂದ್ರ ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಲಿದ್ದು, ಶಾಸಕ ರಫೀಕ್‌ ಅಹಮದ್‌ ಅಧ್ಯಕ್ಷತೆ ವಹಿಸಲಿದ್ದಾರೆ.

ನಗರದ ಮಹಾನಗರ ಪಾಲಿಕೆ ಆವರಣ, ಬಾಳನಕಟ್ಟೆ ಪ್ರದೇಶ, ಶಿರಾಗೇಟ್ ಹಾಗೂ ಕ್ಯಾತ್ಸಂದ್ರದಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಭಾನುವಾರದಿಂದ (ಫೆ.25) ಊಟ–ಉಪಾಹಾರಗಳು ಲಭ್ಯವಾಗಲಿವೆ.

ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ವ್ಯಾಪ್ತಿಯ ಕೋಡಿ ಬಸವೇಶ್ವರ ದೇವಸ್ಥಾನದ ಬಳಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಸಮಾರಂಭ ಕೂಡ ನಡೆಯಲಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry