‘ಜನರಿಗೆ ಸರ್ಕಾರದ ಸಾಧನೆಗಳ ಮಾಹಿತಿ ನೀಡಿ’

7

‘ಜನರಿಗೆ ಸರ್ಕಾರದ ಸಾಧನೆಗಳ ಮಾಹಿತಿ ನೀಡಿ’

Published:
Updated:

ಯಳಂದೂರು: ರಾಜ್ಯ ಸರ್ಕಾರ ಬಡವರಿಗೆ, ರೈತರ ಅಭಿವೃದ್ಧಿಗೆ ಹೊಸದಾಗಿ ನೀಡಿರುವ ಯೋಜನೆಗಳ ಬಗ್ಗೆ ಕಾರ್ಯಕರ್ತರು ಮನದಟ್ಟು ಮಾಡಿಕೊಡಬೇಕು’ ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಬಸವರಾಜು ತಿಳಿಸಿದರು.

ತಾಲ್ಲೂಕಿನ ಅಂಬಳೆ-02 ಗ್ರಾಮದಲ್ಲಿ ಕಾಂಗ್ರೆಸ್‌ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ‘ನಮ್ಮಬೂತ್ ನಮ್ಮ ಹೊಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚುನಾವಣೆ ವೇಳೆಯಲ್ಲಿ ನೀಡಲಾಗಿದ್ದ ಭರವಸೆಗಳಲ್ಲಿ ಶೇ.90ರಷ್ಟನ್ನು ಈಡೇರಿಸಲಾಗಿದೆ. ರೈತರಿಗೆ ಸಾಲ ಮನ್ನಾ ಮಾಡಲಾಗಿದೆ. ಅನೇಕ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ದಾಖಲೆ ಪ್ರಾಮಾಣದ ಅನುದಾನ ಬಿಡುಗಡೆ ಮಾಡಲಾಗಿದೆ. ಮೂಲ ಸೌಲಭ್ಯಗಳನ್ನು ಒದಗಿಸುವಲ್ಲಿ ಶಾಸಕರು ಶ್ರಮಿಸಿದ್ದಾರೆ. ಈ ಎಲ್ಲ ವಿಷಯಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು.

ಮಾಜಿ ಶಾಸಕ ಎಸ್. ಬಾಲರಾಜು, ಜಿಪಂ ಉಪಾಧ್ಯಕ್ಷ ಜೆ. ಯೋಗೇಶ್, ಜಿಲ್ಲಾ ಘಟಕದ ಅಧ್ಯಕ್ಷ ಮರಿಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ವಿ. ಚಂದ್ರು, ಮುಖಂಡರಾದ ಕಿನಕಹಳ್ಳಿ ರಾಚಯ್ಯ, ದೊಡ್ಡಯ್ಯ, ಅಂಬಳೆ ಗ್ರಾ.ಪಂ ಅಧ್ಯಕ್ಷ ಶಿವರಾಮು, ಸದಸ್ಯರಾದ ನಂಜುಂಡಸ್ವಾಮಿ, ಮಹದೇವಶೆಟ್ಟಿ, ಸಿದ್ದನಾಯಕ, ಪುಟ್ಟಸ್ವಾಮಿ, ರವಿ, ಮಹದೇವಸ್ವಾಮಿ, ಕೆಂಪರಾಜು ವೈ.ಎನ್. ಮಹದೇವಶೆಟ್ಟಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry