ಮಾರ್ಚ್ 4ರಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆ

7

ಮಾರ್ಚ್ 4ರಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆ

Published:
Updated:
ಮಾರ್ಚ್ 4ರಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆ

ಧಾರವಾಡ: ನಾಡಿನ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆ ಮಾರ್ಚ್ 4ರಂದು ನಡೆಯಲಿದೆ.

ಈ ಸಂಘವು ಶತಮಾನೋತ್ತರ ಇತಿಹಾಸ ಹೊಂದಿದ್ದು, 50 ವರ್ಷಗಳಿಂದ ಡಾ.ಪಾಟೀಲ ಪುಟ್ಟಪ್ಪ ಅವರು ಅಧ್ಯಕ್ಷರಾಗಿ ಅವಿರೋಧ ಆಯ್ಕೆ ಯಾಗುತ್ತ ಬಂದಿದ್ದಾರೆ. ಆದರೆ, ಈ ಬಾರಿ ಅವರನ್ನು ಶತಾಯ ಗತಾಯ ಸೋಲಿಸಲೇ ಬೇಕು ಎಂದು ಪಣ ತೊಟ್ಟಿದ್ದಾರೆ ಹಿರಿಯ ಸಾಹಿತಿಗಳು.

ಆದರೆ, ಬಹಿರಂಗ ಸಮರ ಸಾರದೆ, ತೆರೆಯ ಹಿಂದೆ ಕಸರತ್ತು ನಡೆಸಿರುವುದು ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗವಾಯಿತು.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಯಸಿ ಚುನಾವಣೆ ಅಖಾಡಕ್ಕೆ ಇಳಿದಿರುವ ನಿವೃತ್ತ ಪ್ರಾಶುಂಪಾಲ ಬಿ.ಎಸ್. ಶಿರೋಳ ಅವರಿಗೆ ಬೆಂಬಲ ಸೂಚಿಸಿ ಪತ್ರಿಕಾಗೋಷ್ಠಿಗೆ ಬಂದಿದ್ದ ಹಿರಿಯ ಸಾಹಿತಿಗಳಾದ ಚನ್ನವೀರ ಕಣವಿ, ಗಿರಡ್ಡಿ ಗೋವಿಂದರಾಜ, ಮಲ್ಲಿಕಾರ್ಜುನ ಹಿರೇಮಠ, ವೆಂಕಟೇಶ ಮಾಚಕನೂರ, ಹನುಮಾಕ್ಷಿ ಗೋಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry