7

ಬಿಎಸ್‌ವೈ ಸ್ವಭಾವ ಬಹಿರಂಗವಾಗಿ ತೋರ್ಪಡಿಸಿದ್ದಾರೆ

Published:
Updated:

ವಿಜಯಪುರ: ‘ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯನ್ನು ಬಚ್ಚಾ’ ಎಂದು ಕರೆದಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಸ್ವಭಾವವನ್ನು ಬಹಿರಂಗವಾಗಿ ತೋರ್ಪಡಿಸಿದ್ದಾರೆ ಎಂದು ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು. ಇಲ್ಲಿ ಶುಕ್ರವಾರ ಮಾತನಾಡಿದರ ಅವರು, ಯಡಿಯೂರಪ್ಪ ಅವರು ನೀಡಿರುವ ಕೀಳುಮಟ್ಟದ ಹೇಳಿಕೆ ಅವರಿಗೆ ಶೋಭೆ ತರುವಂತಹದಲ್ಲ ಎಂದರು.

ಅವರು ಮುಖ್ಯಂತ್ರಿಯಾಗಿ ಕಾರ್ಯನಿರ್ವಹಿಸಿದವರು. ರಾಷ್ಟ್ರೀಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿರುವವರು ಈ ರೀತಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.

ಗುಜರಾತ್‌ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಅವರ ಪ್ರವಾಸದಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ರಾಜ್ಯ ಬಿಜೆಪಿ ನಾಯಕರಿಗೂ ಸೋಲಿನ ಭಯವುಂಟಾಗಿದೆ ಎಂದರು.

ಕೃಷಿಕ ಸಮಾಜ ತಾಲ್ಲೂಕು ಘಟಕದ ಉಪಾಧ್ಯಕ್ಷ ಮಂಡಿಬೆಲೆ ದೇವರಾಜಪ್ಪ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳು ಬಿಜೆಪಿ ಪಕ್ಷದ ನಾಯಕರಲ್ಲಿ ಭಯ ಹುಟ್ಟಿಸಿದೆ ಎಂದರು.

150 ಸ್ಥಾನಗಳನ್ನು ಗೆಲ್ಲುವಂತಹ ಅವರ ಗುರಿ 50 ಕ್ಕೆ ಇಳಿಕೆಯಾಗಿದೆ. ಇದರಿಂದ ಬಿಜೆಪಿ ನಾಯಕರು ಹತಾಶರಾಗಿದ್ದಾರೆ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಯೊಂದು ಘಟನೆಯನ್ನು ಕಾಂಗ್ರೆಸ್ ಸರ್ಕಾರದ ಕಡೆಗೆ ಹೆಬ್ಬೆಟ್ಟು ತೋರಿಸುತ್ತಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಲು ಹೊರಟಿದ್ದಾರೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry