ಆಫ್ಗಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್‌ ದಾಳಿಗೆ 23 ಬಲಿ

7

ಆಫ್ಗಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್‌ ದಾಳಿಗೆ 23 ಬಲಿ

Published:
Updated:
ಆಫ್ಗಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್‌ ದಾಳಿಗೆ 23 ಬಲಿ

ಕಾಬೂಲ್‌: ಆಫ್ಗಾನಿಸ್ತಾನದಲ್ಲಿ ನಡೆದ ಎರಡು ಪ್ರತ್ಯೇಕ ಆತ್ಮಾಹುತಿ ಬಾಂಬ್‌ ದಾಳಿಗಳಲ್ಲಿ ಕನಿಷ್ಠ 23 ಮಂದಿ ಮೃತಪಟ್ಟು 12ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಫರಾಹ್‌ ಜಿಲ್ಲೆಯ ಬಾಲಾ ಬುಲುಕ್‌ ಜಿಲ್ಲೆಯ ಸೇನಾ ಶಿಬಿರದ ಮೇಲೆ ತಾಲಿಬಾನ್‌ ಉಗ್ರರು ನಡೆಸಿದ ದಾಳಿಯಲ್ಲಿ 18 ಮಂದಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ದೌಲತ್‌ ವಜೀರ್‌ ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿಕೋರನೊಬ್ಬ ಜನನಿಬಿಡ ಸ್ಥಳದಲ್ಲಿ ತನ್ನನ್ನು ಸ್ಫೋಟಿಸಿಕೊಂಡ್ಡಿದ್ದರಿಂದ ಮೂವರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ನಸ್ತ್ರತ್‌ ರಹಿಮಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry