ಮಹಿಳೆಯರಿಗೆ ಹೆಚ್ಚು ಟಿಕೆಟ್‌: ರಾಹುಲ್‌ ಸೂಚನೆ

7

ಮಹಿಳೆಯರಿಗೆ ಹೆಚ್ಚು ಟಿಕೆಟ್‌: ರಾಹುಲ್‌ ಸೂಚನೆ

Published:
Updated:

ತಿಕೋಟಾ (ವಿಜಯಪುರ): ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಟಿಕೆಟ್‌ ನೀಡುವ ಜತೆಗೆ ಅವರನ್ನು ಗೆಲ್ಲಿಸಬೇಕು. ಸಚಿವ ಸಂಪುಟದಲ್ಲೂ ಹೆಚ್ಚು ಸ್ಥಾನ ನೀಡಬೇಕು’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರಿಗೆ ಸೂಚಿಸಿದರು.

ಶನಿವಾರ ಇಲ್ಲಿ ಆಯೋಜಿಸಿದ್ದ ಮಹಿಳಾ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಂತೆಯೇ, ಶಾಸನಸಭೆಗಳಲ್ಲಿ ಶೇ 33ರಷ್ಟು ಮಹಿಳಾ ಮೀಸಲಾತಿ ನೀಡುವ ಮಸೂದೆಗೆ ಮೊದಲ ಆದ್ಯತೆ ನೀಡಿ ಜಾರಿಗೊಳಿಸಲಾಗುವುದು’ ಎಂದು ಅವರು ಭರವಸೆ ನೀಡಿದರು.

‘ದೇಶದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವಾಗಿದೆ. ಅತ್ಯಾಚಾರ, ದೌರ್ಜನ್ಯ ಹೆಚ್ಚಿವೆ. ಬಿಜೆಪಿಯವರ ಅಡ್ಡಿಯಿಂದಲೇ ಮಹಿಳಾ ಮೀಸಲಾತಿ ಮಸೂದೆ ಇದುವರೆಗೂ ಜಾರಿಗೊಂಡಿಲ್ಲ’ ಎಂದು ಆಪಾದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry