ಆಲ್‌ ಇಂಗ್ಲೆಂಡ್ ಟೂರ್ನಿಯಿಂದ ಹೊರಬಿದ್ದ ಅಕ್ಸೆಲ್‌ಸನ್‌

7

ಆಲ್‌ ಇಂಗ್ಲೆಂಡ್ ಟೂರ್ನಿಯಿಂದ ಹೊರಬಿದ್ದ ಅಕ್ಸೆಲ್‌ಸನ್‌

Published:
Updated:

ನವದೆಹಲಿ : ಗಾಯದ ಸಮಸ್ಯೆ ಎದುರಿಸುತ್ತಿರುವ ವಿಶ್ವದ ಅಗ್ರ ರ‍್ಯಾಂಕಿಂಗ್ ಆಟಗಾರ ಡೆನ್ಮಾರ್ಕ್‌ನ ವಿಕ್ಟರ್ ಅಕ್ಸೆಲ್‌ಸನ್‌ ಆಲ್‌ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಿಂದ ಹೊರಬಿದ್ದಿದ್ದಾರೆ.

ಮಾರ್ಚ್‌ 14ರಿಂದ 18ರವರೆಗೆ ಬರ್ಮಿಂಗ್‌ಹ್ಯಾಮ್‌ನಲ್ಲಿ ಟೂರ್ನಿ ನಡೆಯಲಿದೆ.

‘ಆಲ್‌ ಇಂಗ್ಲೆಂಡ್‌ನಲ್ಲಿ ಆಡಿದರೆ ಶಾಶ್ವತವಾಗಿ ಗಾಯದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಈಗ ನಾನು ಫಿಟ್ ಆಗಿಲ್ಲ. ಶಸ್ತ್ರಚಿಕಿತ್ಸೆಯ ಬಳಿಕ ಎಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ಆಡುವುದು ಎಲ್ಲಾ ಬ್ಯಾಡ್ಮಿಂಟನ್ ಆಟಗಾರರ ಕನಸು. ಆದರೆ ಈ ವರ್ಷ ಸಾಧ್ಯವಾಗುತ್ತಿಲ್ಲ. ಮನಸ್ಸನ್ನು ಗಟ್ಟಿ ಮಾಡಿಕೊಂಡು ಟೂರ್ನಿಯಿಂದ ಹೊರಗುಳಿಯುವ ನಿರ್ಧಾರಕ್ಕೆ ಬಂದಿದ್ದೇನೆ’ ಎಂದು ಅಕ್ಸೆಲ್‌ಸನ್ ಹೇಳಿದ್ದಾರೆ.

24 ವರ್ಷದ ಆಟಗಾರ 2017ರಲ್ಲಿ ವಿಶ್ವ ಚಾಂಪಿಯನ್‌ಷಿಪ್‌, ದುಬೈ ಸೂಪರ್ ಸರಣಿ, ಜಪಾನ್‌ ಓಪನ್‌, ಇಂಡಿಯಾ ಓಪನ್‌ಗಳಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ಈ ಋತುವಿನ ಆರಂಭದಲ್ಲಿ ಆಡಿದ ಮಲೇಷ್ಯಾ ಮಾಸ್ಟರ್ಸ್ ಟೂರ್ನಿಯ ಎರಡನೇ ಸುತ್ತಿನಲ್ಲಿ ಅವರು ಗಾಯಗೊಂಡು ಹೊರಬಿದ್ದಿದ್ದರು. ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅಂಗಳದಿಂದ ದೂರ ಉಳಿದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry