ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

6ನೆ ವೇತನ ಆಯೋಗದ ಶಿಫಾರಸು ಕೂಡಲೇ ಜಾರಿಯಾಗಬೇಕು: ಮಂಜೇಗೌಡ

Last Updated 24 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ನೌಕರರ ವೇತನ ಹೆಚ್ಚಳ ಸಂಬಂಧ 6ನೇ ವೇತನ ಆಯೋಗ ನೀಡಿರುವ ಶಿಫಾರಸುಗಳನ್ನು ಕೂಡಲೇ ಜಾರಿ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ.ಮಂಜೇಗೌಡ ಆಗ್ರಹಿಸಿದರು.

ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇದರಿಂದ ನೌಕರರ ಸಂಬಳ ಶೇ 30ರಷ್ಟು ಹೆಚ್ಚಳವಾಗಲಿದೆ’ ಎಂದರು.

ಸಮ್ಮೇಳನ: ‘ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಮಹಾಸಮ್ಮೇಳನವನ್ನು ಮಾರ್ಚ್‌ 3ರಂದು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು’ ಎಂದು ತಿಳಿಸಿದರು.

‘ಒಂದು ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಮ್ಮೇಳನದಲ್ಲಿ ಭಾಗವಹಿಸಲಿರುವ ಬೆಂಗಳೂರು ನಗರ ಮತ್ತು ಗ್ರಾಮಾಂತರ ನೌಕರರಿಗೆ ಮಾ.3ರಂದು, ಬೇರೆ ಜಿಲ್ಲೆಗಳಿಂದ ಬರಲಿರುವ ನೌಕರರಿಗೆ ಮಾ.2 ಹಾಗೂ 3ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಸರ್ಕಾರ ಮಂಜೂರು ಮಾಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT