ಸಿಗಂದೂರು ದೇವಸ್ಥಾನದ ಕಟ್ಟಡ ಲೋಕಾಯುಕ್ತಕ್ಕೆ ದೂರು

7

ಸಿಗಂದೂರು ದೇವಸ್ಥಾನದ ಕಟ್ಟಡ ಲೋಕಾಯುಕ್ತಕ್ಕೆ ದೂರು

Published:
Updated:

ಸಾಗರ: ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸಿದೆ ಎಂದು ಸಿಗಂದೂರು ಮಂಜಪ್ಪ ಎಂಬುವವರು ಉಪಲೋಕಾಯುಕ್ತರಿಗೆ ದೂರು ನೀಡಿದ್ದಾರೆ.

ಅಕ್ರಮವಾಗಿ ನಿರ್ಮಿಸಿರುವ ಕಟ್ಟಡವನ್ನು ದೇವಸ್ಥಾನದ ಆಡಳಿತ ಮಂಡಳಿಗೆ ಮಂಜೂರು ಮಾಡಲು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮುಂದಾಗಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ ಕಟ್ಟಡವಿರುವ ಜಾಗವು ಅಭಯಾರಣ್ಯ ವ್ಯಾಪ್ತಿಗೆ ಬರುತ್ತಿದ್ದರೂ ಅದನ್ನು ಮುಚ್ಚಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಉಪಲೋಕಾಯುಕ್ತರು ದೇವಸ್ಥಾನದ ಆಡಳಿತ ಮಂಡಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry