ಬೆಂಗಳೂರು: ಮುಖ್ಯಮಂತ್ರಿ ಮತ್ತು ಸಚಿವರು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಹಾಜರಿದ್ದು ಶಿಷ್ಟಾಚಾರ ಪಾಲಿಸಬೇಕೆಂದು ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭ ಎಲ್ಲ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.
ಈ ಬಗ್ಗೆ ಹಿಂದೆಯೇ ಸೂಚನೆ ನೀಡಿದ್ದರೂ ಶಿಷ್ಟಾಚಾರ ಪಾಲಿಸದೇ ಇರುವುದು ಗಮನಕ್ಕೆ ಬಂದಿದೆ. ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.