ಮೇಯರ್ ಭಾಗ್ಯವತಿ ಕಾಂಗ್ರೆಸ್‌ನಿಂದ ಉಚ್ಛಾಟನೆ

5

ಮೇಯರ್ ಭಾಗ್ಯವತಿ ಕಾಂಗ್ರೆಸ್‌ನಿಂದ ಉಚ್ಛಾಟನೆ

Published:
Updated:

ಮೈಸೂರು: ಪಕ್ಷ ವಿರೋಧಿ ಚಟು ವಟಿಕೆಯ ಕಾರಣ ಮೈಸೂರು ಮೇಯರ್‌ ಭಾಗ್ಯವತಿ ಅವರನ್ನು ಕಾಂಗ್ರೆಸ್‌ನಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಸೂಚನೆ ಉಲ್ಲಂಘಿಸಿ ಜೆಡಿ ಎಸ್ ಜತೆ ಕೈಜೋಡಿಸಿದ ಮೇಯರ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವಧಿಗೆ ಉಚ್ಛಾಟನೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ಆರ್‌.ಮೂರ್ತಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಪಾಲಿಕೆ ಸದಸ್ಯತ್ವ ಮತ್ತು ಮೇಯರ್‌ ಸ್ಥಾನದಿಂದ ಅವರನ್ನು ವಜಾ ಮಾಡು ವಂತೆ ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿದ್ದೇವೆ’ ಎಂದು ಹೇಳಿದರು. ಪಕ್ಷದ ಅಧಿಕೃತ ಅಭ್ಯರ್ಥಿಗೆ ಮಾತ್ರ ಮತ ಹಾಕಬೇಕೆಂದು ಸೂಚಿಸಲಾಗಿತ್ತು. ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಆದರೆ, ಜೆಡಿಎಸ್ ಬೆಂಬಲದಿಂದ ಮೇಯರ್‌ ಹುದ್ದೆ ಅಲಂಕರಿಸಿ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ದೂರಿದರು.

ಪಾಲಿಕೆ ಮೇಯರ್‌ ಚುನಾವಣೆ ಜನವರಿ 24ರಂದು ನಡೆದಿತ್ತು. ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭಾಗ್ಯವತಿ ಅವರು ಜೆಡಿಎಸ್‌ ಮತ್ತು ಬಿಜೆಪಿ ಸದಸ್ಯರ ಬೆಂಬಲದಿಂದ ಗೆಲುವು ಪಡೆದಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry