ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಧಾರ್‌ನಿಂದ 3 ಕೋಟಿ ನಕಲಿ ಪಡಿತರ ಚೀಟಿ ರದ್ದು’

Last Updated 26 ಫೆಬ್ರುವರಿ 2018, 19:36 IST
ಅಕ್ಷರ ಗಾತ್ರ

ಹೈದರಾಬಾದ್: ‘ಆಧಾರ್‌ನಿಂದಾಗಿ ಕಳೆದ ಮೂರು ವರ್ಷಗಳಲ್ಲಿ 2.95 ಕೋಟಿ ನಕಲಿ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ’ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಸಿ.ಆರ್. ಚೌಧರಿ ಹೇಳಿದ್ದಾರೆ.

‘ಆಧಾರ್ ಸಂಖ್ಯೆಯನ್ನು ಸಂಪರ್ಕಿಸುವ ವ್ಯವಸ್ಥೆಯಿಂದಾಗಿ ನಕಲಿ ಪಡಿತರ ಚೀಟಿ ಪತ್ತೆ ಹಚ್ಚುವುದು ಸಾಧ್ಯವಾಗಿದೆ ಮತ್ತು ಇದರಿಂದ ವಾರ್ಷಿಕ ₹ 17,000 ಕೋಟಿ ಉಳಿತಾಯವಾಗಿದೆ’ ಎಂದು ಅವರು ಸೋಮವಾರ ಹೇಳಿದ್ದಾರೆ.

‘ಒಟ್ಟು 23 ಕೋಟಿ ಪಡಿತರ ಚೀಟಿಗಳ ಪೈಕಿ 19 ಕೋಟಿ ಪಡಿತರ ಚೀಟಿಗಳಿಗೆ ಆಧಾರ್ ಸಂಖ್ಯೆ ಸಂಪರ್ಕ ಆಗಿದೆ’ ಎಂದು ತಿಳಿಸಿದ್ದಾರೆ.

‘ನಕಲಿ ಪಡಿತರ ಚೀಟಿಗಳು ರದ್ದಾಗಿರುವುದರಿಂದ ಅರ್ಹರಿಗೆ ಆಹಾರಧಾನ್ಯ ವಿತರಣೆ ಕಾರ್ಯ ಸುಲಭವಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT