‘ರೈತರ ಆತ್ಮಹತ್ಯೆ ತಡೆಯಲು ರಾಜ್ಯ ಸರ್ಕಾರ ವಿಫಲ’

7

‘ರೈತರ ಆತ್ಮಹತ್ಯೆ ತಡೆಯಲು ರಾಜ್ಯ ಸರ್ಕಾರ ವಿಫಲ’

Published:
Updated:

ಎಚ್.ಡಿ.ಕೋಟೆ: ರೈತರ ಆತ್ಮಹತ್ಯೆ ತಡೆಗಟ್ಟಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರಸನ್ನಕುಮಾರ್ ಗೌಡ ಆರೋಪಿಸಿದರು.

ತಾಲ್ಲೂಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಗಳಿಗೆ ಸಾಂತ್ವನ ಹೇಳಲು ಆಗಮಿಸಿದ ಅವರು ತಾಲ್ಲೂಕಿನ ವಡ್ಡರಗುಡಿ ಗ್ರಾಮದ ರೈತರ ಕುಟುಂಬಗಳನ್ನು ಭೇಟಿ ಮಾಡಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಅವರು ನೀಡಿದ ಸಾಂತ್ವನ ಪತ್ರಗಳನ್ನು ನೀಡಿದರು.

ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳು ಪರಿಹಾರಕ್ಕಾಗಿ ನಿತ್ಯ ಸರ್ಕಾರಿ ಕಚೇರಿಗೆ ಅಲೆಯುತ್ತಿದ್ದಾರೆ ಎಂದರು. ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಪ್ಪಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ, ಮುಖಂಡರಾದ ಸಿದ್ದನಾಯಕ, ವಿಶ್ವಾರಾಧ್ಯ, ಗುರುಸ್ವಾಮಿ,

ಮಹೇಶ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry