‘ಸಂಸದರಿಗೆ ಟಿಕೆಟ್‌ ಇಲ್ಲ’

7

‘ಸಂಸದರಿಗೆ ಟಿಕೆಟ್‌ ಇಲ್ಲ’

Published:
Updated:

ಕೊಪ್ಪಳ: ‘ಬಿ.ಎಸ್.ಯಡಿಯೂರಪ್ಪ ಹೊರತುಪಡಿಸಿ ಉಳಿದ ಸಂಸದರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲಾಗದು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ’ ಎಂದು ಬಳ್ಳಾರಿ ಸಂಸದ ಬಿ.ಶ್ರೀರಾಮುಲು ತಿಳಿಸಿದರು.

‘ರಾಜ್ಯ ರಾಜಕೀಯಕ್ಕೆ ಮರಳುವ ಇಚ್ಛೆಯನ್ನು ನಾನು, ಸಂಗಣ್ಣ ಕರಡಿ ಸೇರಿದಂತೆ ಹಲವರು ವ್ಯಕ್ತಪಡಿಸಿದ್ದೇವೆ. ಆದರೆ, ಬಿಜೆಪಿ ಸಂಸದೀಯ ಮಂಡಳಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ’ ಎಂದರು.

‘ಜನಾರ್ದನ ರೆಡ್ಡಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ, ಬಳ್ಳಾರಿ, ಕೊಪ್ಪಳ ಭಾಗದಲ್ಲಿ ಪಕ್ಷದ ಪರ ಪ್ರಚಾರ ಮಾಡಲಿ ದ್ದಾರೆ. ಹೀಗಾಗಿಯೇ ಗಂಗಾವತಿ ತಾಲ್ಲೂಕಿನ ಆನೆ ಗೊಂದಿ ಹಾಗೂ ಬಳ್ಳಾರಿ ಜಿಲ್ಲೆಯ ರಾಂಪುರದಲ್ಲಿ ವಾಸ್ತವ್ಯಕ್ಕೆ ಮನೆ ನೋಡಿದ್ದಾರೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry