ಮಹದಾಯಿ ವಿವಾದ - ಬಿಜೆಪಿಯಿಂದ ಮತದಾರರ ಬ್ಲ್ಯಾಕ್‌ಮೇಲ್: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ

7

ಮಹದಾಯಿ ವಿವಾದ - ಬಿಜೆಪಿಯಿಂದ ಮತದಾರರ ಬ್ಲ್ಯಾಕ್‌ಮೇಲ್: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ

Published:
Updated:
ಮಹದಾಯಿ ವಿವಾದ - ಬಿಜೆಪಿಯಿಂದ ಮತದಾರರ ಬ್ಲ್ಯಾಕ್‌ಮೇಲ್: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಮಹದಾಯಿ ವಿವಾದ ಪರಿಹರಿಸುವ ವಿಷಯವಾಗಿ ಮತದಾರರನ್ನು ಬಿಜೆಪಿ ಬ್ಲ್ಯಾಕ್‌ಮೇಲ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಹದಾಯಿ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಅಮಿತ್‌ ಶಾ ಮತ್ತೊಮ್ಮೆ ಸುಳ್ಳು ಹೇಳಿದ್ದಾರೆ. ಡಿಸೆಂಬರ್ 15ರ ಒಳಗಾಗಿ ಮಹದಾಯಿ ವಿವಾದ ಬಗೆಹರಿಸುತ್ತೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದರು. ಸಮಸ್ಯೆ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ. ಪ್ರಧಾನಿ ಮಧ್ಯಪ್ರವೇಶಿಸಬೇಕಿತ್ತು. ಅವರೂ ಇಚ್ಛಾಶಕ್ತಿ ಪ್ರದರ್ಶಿಸಲಿಲ್ಲ. ಈಗ, ನೀವು ಮತ ನೀಡದಿದ್ದರೆ ಸಮಸ್ಯೆ ಬಗೆಹರಿಸುವುದಿಲ್ಲ ಎಂಬುದಾಗಿ ಬಿಜೆಪಿಯವರು ಮತದಾರರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ.

‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮಹದಾಯಿ ವಿವಾದ ಪರಿಹರಿಸುತ್ತೇವೆ’ ಎಂದು ಅಮಿತ್‌ ಶಾ ಕಲಬುರ್ಗಿಯಲ್ಲಿ ಸೋಮವಾರ ಹೇಳಿದ್ದರು.

ಇದನ್ನೂ ಓದಿ: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮಹದಾಯಿ ವಿವಾದ ಪರಿಹರಿಸುತ್ತೇವೆ’: ಅಮಿತ್‌ ಶಾ

‘ಬಿಜೆಪಿ ಅಧಿಕಾರಕ್ಕೆ ಬಂದರೆ ಮುಷ್ಠಿ ಅಕ್ಕಿಯೇ ಗತಿ. ನಾವು ಪ್ರತಿಯೊಬ್ಬರಿಗೂ ಏಳು ಕಿಲೋ ಅಕ್ಕಿ‌ ಕೊಡುತ್ತಿದ್ದೇವೆ. ಅನ್ನಭಾಗ್ಯ ವಿರೋಧಿಗಳ ಬಗ್ಗೆ ಎಚ್ಚರ ಇರಲಿ. @BSYBJP’ ಎಂದು ಬಿಜೆಪಿಯನ್ನು ಟೀಕಿಸಿ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry