ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೊಟೊಮ್ಯಾಕ್ ವಂಚನೆ ಪ್ರಕರಣ: ಐಟಿಯಿಂದ 12 ದೂರು ದಾಖಲು

Last Updated 27 ಫೆಬ್ರುವರಿ 2018, 14:37 IST
ಅಕ್ಷರ ಗಾತ್ರ

ನವದೆಹಲಿ: ಏಳು ಬ್ಯಾಂಕ್‌ಗಳಿಗೆ ಸಾಲ ಮರುಪಾವತಿ ಮಾಡದೆ ವಂಚಿಸಿದ ಆರೋಪ ಎದುರಿಸುತ್ತಿರುವ ರೊಟೊಮ್ಯಾಕ್ ಪೆನ್‌ ತಯಾರಿಕಾ ಕಂಪನಿಯ ವಿರುದ್ಧ ಆದಾಯ ತೆರಿಗೆ ಇಲಾಖೆ ಕಾನೂನು ಕ್ರಮ ಕೈಗೆತ್ತಿಕೊಂಡಿದ್ದು, 12 ಪ್ರಕರಣಗಳನ್ನು ದಾಖಲಿಸಿದೆ.

ಆದಾಯ ತೆರಿಗೆ ಇಲಾಖೆ 1961ರ ಐಟಿ ಕಾಯ್ದೆ ಅಡಿ ಈ ಕ್ರಮ ಕೈಗೊಂಡಿದೆ. ಬ್ಯಾಂಕ್‌ಗೆ ವಂಚನೆ ಮಾಡಿದ ಪ್ರಕರಣದಲ್ಲಿ ರೊಟೊಮ್ಯಾಕ್ ಪೆನ್‌ ಸಂಸ್ಥೆ ವಿರುದ್ಧ ಒಟ್ಟು 18 ದೂರುಗಳು ದಾಖಲಾಗಿವೆ.

ಫೆ.24ರಂದು ಆರು ದೂರುಗಳು ದಾಖಲಾಗಿವೆ. ಆದಾಯ ತೆರಿಗೆ ಇಲಾಖೆ ಈ ಸಂಬಂಧ ಸಂಸ್ಥೆಯ ಮೂರು ಬ್ಯಾಂಕ್ ಖಾತೆಗಳನ್ನು ಕೂಡಾ ದೂರಿನಲ್ಲಿ ಸೇರಿಸಿದೆ.

ಕಂಪನಿಯ ನಿರ್ದೇಶಕ ವಿಕ್ರಮ್ ಕೊಠಾರಿ ಮತ್ತು ಅವರ ಪುತ್ರ ರಾಹುಲ್‌ ಕೊಠಾರಿ ಈ ಪ್ರಕರಣದ ಪ್ರಮುಖ ಆರೋಪಿಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT