‘ಕಣಕುಂಬಿಯಲ್ಲಿ ಗೋವಾ ವಿದ್ಯಾರ್ಥಿಗಳ ಸತ್ಯಾಗ್ರಹ’

7

‘ಕಣಕುಂಬಿಯಲ್ಲಿ ಗೋವಾ ವಿದ್ಯಾರ್ಥಿಗಳ ಸತ್ಯಾಗ್ರಹ’

Published:
Updated:

ಬೆಳಗಾವಿ: ಮಹದಾಯಿ ನದಿ ತಿರುವು ಯೋಜನೆಗೆ ವಿರೋಧಿಸಿ ಖಾನಾಪುರ ತಾಲ್ಲೂಕಿನ ಕಣಕುಂಬಿಯಲ್ಲಿ, ಗೋವಾ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಅಲ್ಲಿನ ಲೋಕೋಪಯೋಗಿ ಸಚಿವ ಸುದಿನ ಢವಳೀಕರ ಹೇಳಿರುವುದು ಗೋವಾ ಪತ್ರಿಕೆಗಳಲ್ಲಿ ವರದಿಯಾಗಿದೆ.

ಈಚೆಗೆ ಪಣಜಿಯಲ್ಲಿ ಗೋವಾ ಯುವ ಮಂಚ್‌ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದು, ‘ಮಹದಾಯಿ ನೀರನ್ನು ತಿರುಗಿಸುವ ಕರ್ನಾಟಕದ ಯೋಜನೆಯನ್ನು ತಡೆದೇ ತೀರಲು ಪಣತೊಡಲಾಗಿದೆ. ಏಪ್ರಿಲ್‌ನಲ್ಲಿ ಕಾಲೇಜುಗಳ ಪರೀಕ್ಷೆಗಳು ಮುಗಿದ ಕೂಡಲೇ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಲ್ಲಿಗೆ ಬರಬೇಕು. ಏಳು ತಾಸು ಸತ್ಯಾಗ್ರಹ ನಡೆಸಬೇಕು’ ಎಂದು ಹೇಳಿದ್ದಾರೆ.

‘ಹೋರಾಟಕ್ಕೆ ವಿದ್ಯಾರ್ಥಿಗಳು ಸಜ್ಜಾಗಬೇಕು. ಮಹದಾಯಿ ಉಳಿಸಿಕೊಳ್ಳುವುದಕ್ಕೋಸ್ಕರ ಏನು ಬೇಕಾದರೂ ಮಾಡುವುದಕ್ಕೆ ಸಿದ್ಧರಿದ್ದೇವೆ ಎಂಬುದನ್ನು ಕರ್ನಾಟಕಕ್ಕೆ ತೋರಿಸಬೇಕು’ ಎಂದು ಸಚಿವರು ಹೇಳಿದ್ದಾಗಿ ಮಾಧ್ಯಮ ವರದಿಯಲ್ಲಿದೆ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry