‘ಬೆಂಗಳೂರು ರಕ್ಷಿಸಿ’ : ಮಾ.2ರಿಂದ ಬಿಜೆಪಿ ಪಾದಯಾತ್ರೆ

7

‘ಬೆಂಗಳೂರು ರಕ್ಷಿಸಿ’ : ಮಾ.2ರಿಂದ ಬಿಜೆಪಿ ಪಾದಯಾತ್ರೆ

Published:
Updated:

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಲೆಯೆಬ್ಬಿಸಲು ಮುಂದಾಗಿರುವ ಬಿಜೆಪಿ ನಾಯಕರು, ‘ಬೆಂಗಳೂರು ರಕ್ಷಿಸಿ’ ಎಂಬ ಘೋಷಣೆಯಡಿ 19 ದಿನ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಮಾ.2ರಂದು ಇಲ್ಲಿನ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಗಲಿದ್ದು, ಮಾ.15ರವರೆಗೆ ನಡೆಯಲಿದೆ. ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್‌, ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ. ಸದಾನಂದಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಯಾತ್ರೆಯ ನೇತೃತ್ವ ವಹಿಸಿರುವ ಶಾಸಕ ಆರ್. ಅಶೋಕ್‌ ಮಾಧ್ಯಮಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ಆಡಳಿತದಿಂದ ಬೆಂಗಳೂರನ್ನು ರಕ್ಷಿಸಿ, ವಿಶ್ವದ ಮಾದರಿ ನಗರವನ್ನಾಗಿ ಬೆಂಗಳೂರನ್ನು ರೂಪಿಸಿ’ ಎಂಬ ಅಭಿಯಾನ ನಡೆಯಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ (ಬಿಬಿಎಂಪಿ) 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ದಿನ ಬೆಳಗ್ಗೆ 8ರಿಂದ 11ರವರೆಗೆ, ಸಂಜೆ 4ರಿಂದ 8ಗಂಟೆಯವರೆಗೆ ಯಾತ್ರೆ ನಡೆಸಲಾಗುವುದು ಎಂದೂ ಅವರು ವಿವರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry