ಪಿಎಮ್‌ಎಲ್‌–ಎನ್‌ ಹಂಗಾಮಿ ಅಧ್ಯಕ್ಷರಾಗಿ ಶಹಬಾಜ್‌ ಆಯ್ಕೆ

7

ಪಿಎಮ್‌ಎಲ್‌–ಎನ್‌ ಹಂಗಾಮಿ ಅಧ್ಯಕ್ಷರಾಗಿ ಶಹಬಾಜ್‌ ಆಯ್ಕೆ

Published:
Updated:
ಪಿಎಮ್‌ಎಲ್‌–ಎನ್‌ ಹಂಗಾಮಿ ಅಧ್ಯಕ್ಷರಾಗಿ ಶಹಬಾಜ್‌ ಆಯ್ಕೆ

ಲಾಹೋರ್‌: ಪಂಜಾಬ್‌ ಪ್ರಾಂತ್ಯದ ಮುಖ್ಯಮಂತ್ರಿ ಶಹಬಾಜ್‌ ಷರೀಫ್‌ ಅವರು ಪಾಕಿಸ್ತಾನ ಮುಸ್ಲಿಂ ಲೀಗ್‌ ನವಾಜ್‌ನ (ಪಿಎಮ್‌ಎಲ್‌–ಎನ್‌) ಹಂಗಾಮಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶಹಬಾಜ್‌ ಅವರ ಹಿರಿಯ ಸಹೋದರ, ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರನ್ನು ಪಕ್ಷದ ಸರ್ವೋಚ್ಛ ನಾಯಕರನ್ನಾಗಿ ಘೋಷಿಸಲಾಗಿದೆ.

ನವಾಜ್‌ ಷರೀಫ್‌ ಅವರ ನಿವಾಸದಲ್ಲಿ ಮಂಗಳವಾರ ನಡೆದ ಪಕ್ಷದ ಕೇಂದ್ರ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪಕ್ಷದ ಹಂಗಾಮಿ ಅಧ್ಯಕ್ಷ ಸ್ಥಾನಕ್ಕೆ ಶಹಬಾಜ್‌ ಅವರ ಹೆಸರನ್ನು ಷರೀಫ್‌ ಸೂಚಿಸಿದರು. ಇದನ್ನು ಸಭೆ ಸರ್ವಾನುಮತದಿಂದ ಅನುಮೋದಿಸಿತು.

ಇಸ್ಲಾಮಾಬಾದ್‌ನಲ್ಲಿ ಮುಂದಿನ ತಿಂಗಳು ಪಕ್ಷದ ಸರ್ವ ಸದಸ್ಯರ ಸಭೆ ನಡೆಯಲಿದೆ. ಅಲ್ಲಿ ಶಹಬಾಜ್‌ ಅವರನ್ನು ಪೂರ್ಣಾವಧಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಸುಪ್ರೀಂಕೋರ್ಟ್‌ ಇದೇ 22ರಂದು ಷರೀಫ್‌ ಅವರನ್ನು ಪಕ್ಷದ ಅಧ್ಯಕ್ಷ ಹುದ್ದೆಯಿಂದ ಅನರ್ಹಗೊಳಿಸಿತ್ತು. ಅಲ್ಲದೆ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕೈಗೊಂಡಿದ್ದ ಎಲ್ಲ ನಿರ್ಣಯಗಳನ್ನು ರದ್ದುಗೊಳಿಸಿತ್ತು. ಹೀಗಾಗಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry