ಶ್ರೀದೇವಿಯ ಅಂತಿಮ ದರ್ಶನ ಪಡೆದ ಸಿನಿತಾರೆಯರು, ರಾಜಕಾರಣಿಗಳು, ಅಭಿಮಾನಿಗಳು

7

ಶ್ರೀದೇವಿಯ ಅಂತಿಮ ದರ್ಶನ ಪಡೆದ ಸಿನಿತಾರೆಯರು, ರಾಜಕಾರಣಿಗಳು, ಅಭಿಮಾನಿಗಳು

Published:
Updated:
ಶ್ರೀದೇವಿಯ ಅಂತಿಮ ದರ್ಶನ ಪಡೆದ ಸಿನಿತಾರೆಯರು, ರಾಜಕಾರಣಿಗಳು, ಅಭಿಮಾನಿಗಳು

ಮುಂಬೈ: ಸಿನಿಮಾ ತಾರೆಯರು, ರಾಜಕಾರಣಿಗಳು, ಗಣ್ಯರು ಸೇರಿದಂತೆ ಸಾವಿರಾರು ಜನ ಸಾರ್ವಜನಿಕರು ನಟಿ ಶ್ರೀದೇವಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಅಂಧೇರಿ ವೆಸ್ಟ್‌ನಲ್ಲಿರುವ ಲೋಖಂಡವಾಲಾದ ಸೆಲೆಬ್ರೇಷನ್‌ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ಸಾರ್ವಜನಿಕರ ದರ್ಶನಕ್ಕೆ ಶ್ರೀದೇವಿ ಪಾರ್ಥಿವ ಶರೀರವನ್ನುಇರಿಸಲಾಗಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರ ವರೆಗೂ ಸಿನಿಮಾ ತಾರೆಯರು, ರಾಜಕಾರಣಿಗಳು, ಗಣ್ಯರು ಸೇರಿದಂತೆ ಸಾವಿರಾರು ಜನ ಸಾರ್ವಜನಿಕರು ಅಂತಿಮ ದರ್ಶನ ಪಡೆದರು.

ನಟಿ ಐಶ್ವರ್ಯ ರೈ, ಅಮಿತಾಬ್, ಶಾರೂಕ್‌ ಖಾನ್‌, ಸಲ್ಮಾನ್‌ ಖಾನ್‌, ಸೇರಿದಂತೆ ಹಿರಿಯ ಕಿರಿಯ ಬಾಲಿವುಡ್‌ ನಟ ನಟಿಯರು, ತಂತ್ರಜ್ಞರು, ನಿರ್ಮಾಪಕರು, ರಾಜಕಾರಣಿಗಳು ಸೇರಿದಂತೆ ಸಾವಿರಾರು ಅಭಿಮಾನಿಗಳು ಅಂತಿಮ ದರ್ಶನ ಪಡೆದರು.

ಮಧ್ಯಾಹ್ನ 2 ಗಂಟೆಗೆ ಅಂತಿಮ ಯಾತ್ರೆ ಆರಂಭವಾಗಲಿದೆ. ಸ್ಪೋರ್ಟ್‌ ಕ್ಲಬ್‌ನಿಂದ ವಿಲೆ ಪಾರ್ಲೆ ಸೇವಾ ಸಮಾಜ ರುದ್ರಭೂಮಿವರೆಗೆ ಮೆರವಣಿಗೆ ನಡೆಯಲಿದೆ. ನಂತರ ಅಂತ್ಯಸಂಸ್ಕಾರ ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry