ಒಬಿಸಿ ಸಮಾವೇಶಕ್ಕೆ ಬಿಜೆಪಿ ತಯಾರಿ

7

ಒಬಿಸಿ ಸಮಾವೇಶಕ್ಕೆ ಬಿಜೆಪಿ ತಯಾರಿ

Published:
Updated:
ಒಬಿಸಿ ಸಮಾವೇಶಕ್ಕೆ ಬಿಜೆಪಿ ತಯಾರಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮ್ಯಯನವರ ಜತೆಗೆ ಗುರುತಿಸಿಕೊಂಡಿರುವ ಹಿಂದುಳಿದ ಸಮುದಾಯದವರನ್ನು ತನ್ನತ್ತ ಆಕರ್ಷಿಸಲು ಬಿಜೆಪಿ ತಯಾರಿ ನಡೆಸಿದೆ.

‘ಹಿಂದುಳಿದ ವರ್ಗಕ್ಕೆ ಸೇರಿದ ಎಲ್ಲ ಸಮುದಾಯವರನ್ನು ಪಕ್ಷದ ವೇದಿಕೆಯಡಿ ಒಗ್ಗೂಡಿಸಲು ಎರಡು ಬೃಹತ್ ಸಮಾವೇಶಗಳನ್ನು ನಡೆಸಲಾಗುವುದು. ಉತ್ತರ ಕರ್ನಾಟಕ ಭಾಗದಲ್ಲಿ ಬಸವಣ್ಣನವರ ಐಕ್ಯ ಸ್ಥಳ ಕೂಡಲ ಸಂಗಮದಲ್ಲಿ ಹಾಗೂ ಮಧ್ಯ ಕರ್ನಾಟಕದಲ್ಲಿ ಕನಕದಾಸರ ಕರ್ಮಭೂಮಿ ಕಾಗಿನೆಲೆಯಲ್ಲಿ ಸಮಾವೇಶಗಳನ್ನು ನಡೆಸುವ ಬಗ್ಗೆ ಚರ್ಚೆ ನಡೆದಿದೆ’ ಎಂದು ಬಿಜೆಪಿ ಮುಖಂಡ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ರಾಯಚೂರಿನಲ್ಲಿ ಗುರುವಾರ (ಮಾ.1) ಈ ಬಗ್ಗೆ ಸಭೆ ನಡೆಯಲಿದೆ. ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ಹಿಂದುಳಿದ ಮೋರ್ಚಾದ ಅಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಹಾಗೂ ಮೋರ್ಚಾದ ಎಲ್ಲ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry