ವೇತನ ಪರಿಷ್ಕರಣೆಗೆ ಮುಖ್ಯಮಂತ್ರಿ ಅಂಕಿತ

7

ವೇತನ ಪರಿಷ್ಕರಣೆಗೆ ಮುಖ್ಯಮಂತ್ರಿ ಅಂಕಿತ

Published:
Updated:
ವೇತನ ಪರಿಷ್ಕರಣೆಗೆ ಮುಖ್ಯಮಂತ್ರಿ ಅಂಕಿತ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ 6ನೇ ವೇತನ ಪರಿಷ್ಕರಣೆ ಸಂಬಂಧ ಅಧಿಕೃತ ಆದೇಶಕ್ಕೆ ಮುಖ್ಯಮಂತ್ರಿಯವರು ಅಂಕಿತ ಹಾಕಿದ್ದಾರೆ.

ಆದೇಶ ಗುರುವಾರ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ವೇತನ ಆಯೋಗದ ಶಿಫಾರಸು ಅನ್ವಯ ನೌಕರರ ವೇತನ ಶೇ.30ರಷ್ಟು ಹೆಚ್ವಳವಾಗಲಿದೆ. ಶನಿವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಇದಕ್ಕೆ ಘಟನೋತ್ತರ ಮಂಜೂರಾತಿ ಸಿಗಲಿದೆ.

ಮೂಲ ವೇತನಕ್ಕೆ ಶೇ. 30 ರಷ್ಟು ಫಿಟ್‌ಮೆಂಟ್‌ (ತಾರತಮ್ಯ ಸರಿದೂಗಿಸುವ ಮೊತ್ತ) ನೀಡಿ ವೇತನ ಪರಿಷ್ಕರಿಸಲಾಗಿದೆ. ಏಪ್ರಿಲ್‌ 1 ರಿಂದಲೇ ನೌಕರರು ಪರಿಷ್ಕೃತ ವೇತನ ಪಡೆಯಲಿದ್ದಾರೆ. ಚುನಾವಣೆ ಹೊಸ್ತಿಲಿನಲ್ಲಿ ನಿಂತಿರುವುದರಿಂದ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ.  ತುಟ್ಟಿಭತ್ಯೆಯನ್ನು ಮೂಲ ವೇತನದಲ್ಲಿ ವಿಲೀನಗೊಳಿಸಿ, ಕನಿಷ್ಠ ಮೂಲ ವೇತನವನ್ನು ₹17,000 ಕ್ಕೆ ನಿಗದಿ ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry