ಲೋಕಪಾಲ ಆಯ್ಕೆ ಸಮಿತಿ ಸಭೆ: ವಿಶೇಷ ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜುನ ಖರ್ಗೆ

ಶುಕ್ರವಾರ, ಮಾರ್ಚ್ 22, 2019
21 °C

ಲೋಕಪಾಲ ಆಯ್ಕೆ ಸಮಿತಿ ಸಭೆ: ವಿಶೇಷ ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜುನ ಖರ್ಗೆ

Published:
Updated:
ಲೋಕಪಾಲ ಆಯ್ಕೆ ಸಮಿತಿ ಸಭೆ: ವಿಶೇಷ ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯ ಲೋಕಪಾಲ ಆಯ್ಕೆ ಸಮಿತಿ ಸಭೆಗೆ ‘ವಿಶೇಷ ಆಹ್ವಾನಿತನಾಗಿ ಹಾಜರಾಗುವುದಿಲ್ಲ’ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪತ್ರದ ಮೂಲಕ ತಿಳಿಸಿದ್ದಾರೆ.

ಲೋಕಪಾಲ ಆಯ್ಕೆ ಸಮಿತಿ ನೀಡಲಾಗಿದ್ದ ವಿಶೇಷ ಆಹ್ವಾನವನ್ನು ಮಲ್ಲಿಕಾರ್ಜುನ ಖರ್ಗೆ ತಿರಸ್ಕರಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ.

ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಸಂಸದೀಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಎರಡು ಪುಟಗಳ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಧ್ವನಿಯನ್ನು ಅಡಗಿಸುತ್ತಿದೆ ಎಂದು ಪತ್ರದಲ್ಲಿ ದೂರಿದ್ದಾರೆ.

ಪ್ರತಿಪಕ್ಷದ ನಾಯಕರನ್ನು ಲೋಕಪಾಲ ಆಯ್ಕೆ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳಬೇಕಾದರೆ ತಿದ್ದುಪಡಿ ತರುವ ಅಗತ್ಯವಿದೆ. ಅದಕ್ಕಾಗಿ ಖರ್ಗೆ ಅವರನ್ನು ವಿಶೇಷ ಆಹ್ವಾನಿತರನ್ನಾಗಿ ಕರೆಯಲಾಗಿತ್ತು. ಇದನ್ನು ತಿರಸ್ಕರಿಸುವ ಮೂಲಕ ಖರ್ಗೆ ಕೇಂದ್ರದ ವಿರುದ್ಧ ಪ್ರತಿಭಟನೆ ಸಾರಿದ್ದಾರೆ.

ಈ ಸಭೆಗೆ ಸ್ಪೀಕರ್‌ ಸುಮಿತ್ರಾ ಮಹಾಜನ್‌, ಸಿಜೆಐ ದೀಪಕ್‌ ಮಿಶ್ರಾ, ಸಚಿವ ಜಿತೇಂದ್ರ ಸಿಂಗ್‌ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry