ಅನಧಿಕೃತ ಕಸಾಯಿಖಾನೆಗೆ ಸಚಿವೆ ಮನೇಕಾ ಗಾಂಧಿ ಭೇಟಿ: ತನಿಖೆಗೆ ಸೂಚನೆ

7

ಅನಧಿಕೃತ ಕಸಾಯಿಖಾನೆಗೆ ಸಚಿವೆ ಮನೇಕಾ ಗಾಂಧಿ ಭೇಟಿ: ತನಿಖೆಗೆ ಸೂಚನೆ

Published:
Updated:
ಅನಧಿಕೃತ ಕಸಾಯಿಖಾನೆಗೆ ಸಚಿವೆ ಮನೇಕಾ ಗಾಂಧಿ ಭೇಟಿ: ತನಿಖೆಗೆ ಸೂಚನೆ

ಬೆಳಗಾವಿ: ಇಲ್ಲಿನ ಆಟೊ ನಗರದಲ್ಲಿರುವ ಅನಧಿಕೃತ ಎನ್ನಲಾದ ಕಸಾಯಿಖಾನೆಗೆ ಕೇಂದ್ರ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಭೇಟಿ ನೀಡಿ ಪರಿಶೀಲಿಸಿದರು.

ಅನಧಿಕೃತ ಕಸಾಯಿಖಾನೆ ನಡೆಸಲು ಸ್ಥಳೀಯ ರಾಜಕಾರಣಿಗಳ ಬೆಂಬಲ ಇದೆ ಎಂದು ದೂರಿದರು. ಅನಧಿಕೃತ ಕಸಾಯಿಖಾನೆ ತೆರೆದಿದ್ದರೂ ಇದನ್ನು ತಡೆಯುವಲ್ಲಿ ಸ್ಥಳೀಯ ಪೊಲೀಸರು ವಿಫಲರಾಗಿದ್ದಾರೆ. ಇವರ ವಿರುದ್ಧ ತನಿಖೆಗೆ ಸೂಚಿಸಲಾಗುವುದು ಎಂದು ಮನೇಕಾ ಗಾಂಧಿ ಸುದ್ದಿಗಾರರಿಗೆ ತಿಳಿಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ಸಂಸದರಾದ ಪ್ರಹ್ಲಾದ ಜೋಶಿ, ಸುರೇಶ ಅಂಗಡಿ, ಶಾಸಕರಾದ ಸಂಜಯ ಪಾಟೀಲ, ಡಾ.ವಿಶ್ವನಾಥ ಪಾಟೀಲ ಈ ವೇಳೆ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry