ಜಿಲ್ಲೆಯಲ್ಲಿ 14 ಲಕ್ಷ ಮತದಾರರು

7
ಅಂತಿಮ ಪಟ್ಟಿ ಪ್ರಕಟಿಸಿದ ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ 14 ಲಕ್ಷ ಮತದಾರರು

Published:
Updated:
ಜಿಲ್ಲೆಯಲ್ಲಿ 14 ಲಕ್ಷ ಮತದಾರರು

ಹಾಸನ: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 14,04,319 ಮತದಾರರು ಈ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದ ಹಕ್ಕು ಚಲಾಯಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಯೂ ಆದ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಅಂತಿಮ ಮತದಾರರ ಪಟ್ಟಿಯನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಬುಧವಾರ ಪ್ರಕಟಿಸಿದ ಜಿಲ್ಲಾಧಿಕಾರಿ, 7,09,910 ಪುರುಷರು ಹಾಗೂ 6,94,409 ಮಹಿಳೆಯರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 1966 ಮತಗಟ್ಟೆಗಳನ್ನು ತೆರೆಯಲಾಗುತ್ತಿದೆ. ಹೊಸದಾಗಿ ಒಟ್ಟು 33,106 ಮಂದಿ ಮತದಾರರು ಹೆಸರು ನೋಂದಣಿ ಮಾಡಿದ್ದಾರೆ. ಇದರಲ್ಲಿ 18 ರಿಂದ 19 ವರ್ಷ ವಯಸ್ಸಿನ ಒಟ್ಟು 15,287 ಯುವ ಮತದಾರರು ಸೇರಿದ್ದಾರೆ ಎಂದರು.

ಅಲ್ಲದೆ, ಮರಣ, ವಲಸೆ, ಪುನರಾವರ್ತನೆ ಹಾಗೂ ಅನರ್ಹತೆ ಕಾರಣಕ್ಕಾಗಿ ಒಟ್ಟು 35,988 ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಇದರಲ್ಲಿ 17,965 ಪುರುಷರು ಹಾಗೂ 18,023 ಮಹಿಳೆಯರು ಸೇರಿದ್ದಾರೆ. ಒಟ್ಟು 6538 ಮತದಾರರು

ಹೆಸರು, ವಿಳಾಸ ಸೇರಿದಂತೆ ಇತರೆ ಅಂಶಗಳನ್ನು ತಿದ್ದುಪಡಿ ಮಾಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಮತದಾರರ ನೋಂದಣಿ ನಿಯಮ 1960ರ ಕಲಂ 22(1) ರಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಎಲ್ಲಾ ರಾಜಕೀಯ ಪಕ್ಷಗಳಿಗೆ

ಅಂತಿಮ ಮತದಾರರ ಪಟ್ಟಿ ವಿತರಿಸಲಾಯಿತು.

ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ನಾರಾಯಣಗೌಡ, ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕ ಅಧ್ಯಕ್ಷ ಎ.ಪಿ.ಅಹಮದ್, ಬಿಜೆಪಿ ಜಿಲ್ಲಾ ಘಟಕ ಕಾರ್ಯದರ್ಶಿ ವೇಣುಗೋಪಾಲ, ಜೆಡಿಎಸ್‌ನ ಶೇಷಾದ್ರಿ, ಭಾರತ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಂ.ಸಿ. ಡೋಂಗ್ರೆ ಹಾಜರಿದ್ದರು.

ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ರಾಜಕೀಯ ಪಕ್ಷಗಳಿಂದ ಮತಗಟ್ಟೆ ಹಂತವಾರು ಏಜೆಂಟರನ್ನು ನೇಮಿಸಿ ಪಟ್ಟಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry