ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿನ ಚಕಮಕಿ: ಭದ್ರತಾ ಪಡೆಯಿಂದ ಪಾಕ್ ಉಗ್ರನ ಹತ್ಯೆ

Last Updated 1 ಮಾರ್ಚ್ 2018, 13:15 IST
ಅಕ್ಷರ ಗಾತ್ರ

ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರ ಜಿಲ್ಲೆಯ ಹಾಜಿನ್ ಪ್ರದೇಶದಲ್ಲಿ ಭದ್ರತಾ ಪಡೆ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಒಬ್ಬ ಉಗ್ರ ಹತನಾಗಿದ್ದಾನೆ.

‘ಪೊಲೀಸರು, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್ ಎ ತೊಯ್ಬಾ (ಎಲ್ಇಟಿ) ಉಗ್ರನನ್ನು ಹತ್ಯೆ ಮಾಡಲಾಗಿದೆ. ಆತ ಬೇರೆ ದೇಶದವನು ಎಂಬುದು ಖಚಿತವಾಗಿದೆ’ ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಶೇಷಪಾಲ್ ಯಾದವ್ ಟ್ವೀಟ್ ಮಾಡಿದ್ದಾರೆ.

ಗುಂಡಿನ ಚಕಮಕಿ ನಡೆದ ವೇಳೆ ಮನೆಗಳಿಂದ ಹೊರಬಂದ ಜನರು ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದು ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿತು. ಒಂದು ಎಕೆ 47 ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎರಡು ದಿನಗಳ ಹಿಂದಷ್ಟೇ ಇದೇ ಪ್ರದೇಶದಲ್ಲಿ ಪಾಕಿಸ್ತಾನದ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT