ದ್ವಿತೀಯ ಪಿಯು ಪರೀಕ್ಷೆ : ಕಲಬುರ್ಗಿಯಲ್ಲಿ ಇಬ್ಬರ ಡಿಬಾರ್‌

7

ದ್ವಿತೀಯ ಪಿಯು ಪರೀಕ್ಷೆ : ಕಲಬುರ್ಗಿಯಲ್ಲಿ ಇಬ್ಬರ ಡಿಬಾರ್‌

Published:
Updated:

ಬೆಂಗಳೂರು: ರಾಜ್ಯದಾದ್ಯಂತ ದ್ವಿತೀಯ ಪಿ.ಯು ಪರೀಕ್ಷೆ ಗುರುವಾರ ಆರಂಭವಾಗಿದ್ದು, ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನಲ್ಲಿ ಅರ್ಥಶಾಸ್ತ್ರ ಪರೀಕ್ಷೆಯ ವೇಳೆ ನಕಲು ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್‌ ಮಾಡಲಾಗಿದೆ.

ಬೆಂಗಳೂರಿನ ಫ್ರೇಜರ್‌ಟೌನ್‌ನ ಗುಡ್‌ವಿಲ್‌ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ 11 ವಿದ್ಯಾರ್ಥಿಗಳು ತಡವಾಗಿ ಬಂದ ಕಾರಣಕ್ಕೆ ಅವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಿಲ್ಲ.

ಅರ್ಥಶಾಸ್ತ್ರ ವಿಷಯದ ಪರೀಕ್ಷೆಗೆ 3,44,578 ವಿದ್ಯಾರ್ಥಿಗಳು ಹಾಜರಾಗಿದ್ದರೆ, 20,772 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಭೌತ ವಿಜ್ಞಾನ ವಿಷಯದ ಪರೀಕ್ಷೆಗೆ 2,15,740 ವಿದ್ಯಾರ್ಥಿಗಳು ಹಾಜರಾಗಿದ್ದರೆ, 5,257 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry