‘ಸುಲಭ ನೋಂದಣಿ’ಗೆ ಹೈಕೋರ್ಟ್‌ ಅಸ್ತು

7

‘ಸುಲಭ ನೋಂದಣಿ’ಗೆ ಹೈಕೋರ್ಟ್‌ ಅಸ್ತು

Published:
Updated:

ಬೆಂಗಳೂರು: ಆನ್‌ಲೈನ್‌ನಲ್ಲಿ ಆಸ್ತಿ ನೋಂದಣಿ ಮಾಡುವ ‘ಸುಲಭ ನೋಂದಣಿ’ ಯೋಜನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಆನೇಕಲ್ ತಾಲ್ಲೂಕಿನ ಕೆ.ಎಸ್.ಯತಿರಾಜ್ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಗಳ ಮೇಲಿನ ಕಾಯ್ದಿರಿಸಿದ್ದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್‌.ಸುನಿಲ್ ದತ್ ಯಾದವ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಪ್ರಕಟಿಸಿದೆ.

‘ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಸರಳೀಕರಿಸಲಾಗಿದೆ. ಇದು ಸಾರ್ವಜನಿಕರಿಗೆ ಉಪಯೋಗಕಾರಿಯಾಗಿದೆ. ಆದ್ದರಿಂದ, ಈ ಪ್ರಕರಣದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸಲು ಬಯಸುವುದಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿಗಳನ್ನು ವಜಾಗೊಳಿಸಲಾಗಿದೆ.

‘ನೋಂದಣಿ ಕಾಯ್ದೆಗೆ ತಿದ್ದುಪಡಿ ತರದೇ ಆನ್‌ಲೈನ್ ಆಸ್ತಿ ನೋಂದಣಿ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಗ್ರಾಮೀಣ ಪ್ರದೇಶದ ಬಹುತೇಕರಿಗೆ ತಂತ್ರಜ್ಞಾನದ ಪರಿಚಯವಿಲ್ಲ. ಆದ್ದರಿಂದ ಸುಲಭ ನೋಂದಣಿ ಯೋಜನೆ ರದ್ದುಪಡಿಸಲು ಸರ್ಕಾರಕ್ಕೆ ಆದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry