ಪಾಕ್‌ ಉಗ್ರನ ಹತ್ಯೆ

7

ಪಾಕ್‌ ಉಗ್ರನ ಹತ್ಯೆ

Published:
Updated:

ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರ ಜಿಲ್ಲೆಯ ಹಾಜಿನ್ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಪಾಕಿಸ್ತಾನದ ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ.

‘ಪೊಲೀಸರು, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್ ಎ ತಯ್ಯಿಬ (ಎಲ್ಇಟಿ) ಸಂಘಟನೆಯ ಉಗ್ರನನ್ನು ಕೊಲ್ಲಲಾಗಿದೆ. ಆತ ಬೇರೆ ದೇಶದವನು ಎಂಬುದು ಖಚಿತವಾಗಿದೆ’ ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಶೇಷಪಾಲ್ ಯಾದವ್ ಟ್ವೀಟ್ ಮಾಡಿದ್ದಾರೆ.

ಗುಂಡಿನ ಚಕಮಕಿ ನಡೆದ ವೇಳೆ ಮನೆಗಳಿಂದ ಹೊರಬಂದ ಜನರು ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿ

ದ್ದಾರೆ. ಇದು ಸಂಘರ್ಷಕ್ಕೆ ಎಡೆ ಮಾಡಿ

ಕೊಟ್ಟಿತು. ಎಕೆ 47 ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಎರಡು ದಿನಗಳ ಹಿಂದಷ್ಟೇ ಇದೇ ಪ್ರದೇಶದಲ್ಲಿ ಪಾಕಿಸ್ತಾನದ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಎಲ್ಇಟಿ ಉಗ್ರರಿಗೆ ಹಾಜಿನ್ ಹೊಸ ಅಡಗುದಾಣ

ವಾಗುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ.

ಅಪ್ರಚೋದಿತ ದಾಳಿ

ಪೂಂಛ್ ಜಿಲ್ಲೆಯ ಮಾಂಕೋಟೆ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆಯು ಗುರುವಾರ ಕದನ ವಿರಾಮ ಉಲ್ಲಂಘಿಸಿದೆ. ಇದರಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ.

‘ಪಾಕಿಸ್ತಾನ ದಾಳಿಗೆ ಭಾರತ ದಿಟ್ಟ ಉತ್ತರ ನೀಡಿದೆ’ ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಗಡಿಯಲ್ಲಿನ ಪರಿ

ಸ್ಥಿತಿಯನ್ನು ನಿಯಂತ್ರಣಕ್ಕೆ ತರುವಂತೆ ಒತ್ತಾಯಿಸಿದ ಮರುದಿನವೇ ಕದನವಿರಾಮ ಉಲ್ಲಂಘನೆ ನಡೆದಿದೆ. ಎರಡೂ ರಾಷ್ಟ್ರಗಳು ಮಾತುಕತೆ ಮೂಲಕ ಶಾಂತಿ ಕಾಪಾಡಬೇಕು ಎಂದಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry