ಸಿಎಂ ವಿರುದ್ಧ ತನಿಖೆ–ಅನುಮತಿ ಕೋರಿಕೆ

7

ಸಿಎಂ ವಿರುದ್ಧ ತನಿಖೆ–ಅನುಮತಿ ಕೋರಿಕೆ

Published:
Updated:

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017 ಅ.22ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾಗ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಿದ್ದರು. ಅವರ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಕೋರಿ ಪರಿಸರವಾದಿ ಶಶಿಧರ ಶೆಟ್ಟಿ ಎಂಬುವವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

‘ಒಂದು ವೇಳೆ ರಾಜ್ಯಪಾಲರು ಅನುಮತಿ ನೀಡಿದರೆ, ಅಧಿಕಾರ ದುರುಪಯೋಗಪಡಿಸಿದ ಆರೋಪದಡಿ ಮುಖ್ಯಮಂತ್ರಿ ಸಮೇತ ಸಚಿವರಾದ ಡಿ.ಕೆ.ಶಿವಕುಮಾರ್, ರಮಾನಾಥ ರೈ ಹಾಗೂ ಯು.ಟಿ.ಖಾದರ್ ಅವರ ವಿರುದ್ಧ ನ್ಯಾಯಾಲಯದಲ್ಲಿ ಕೇಸು ದಾಖಲಿಸಲಿದ್ದೇನೆ. ಹಾಗೇನಾದರೂ ಆದಲ್ಲಿ ಮುಂಬರುವ ಚುನಾವಣೆಯಲ್ಲಿ ಅವರಿಗೆ ಸ್ಪರ್ಧಿಸಲು ಕಷ್ಟವಾಗುವ ಸಾಧ್ಯತೆ ಇದೆ’ ಎಂದು ಅವರು ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry