ಕಣ್ಣಿನ ಶಸ್ತ್ರ ಚಿಕಿತ್ಸೆ ಯಶಸ್ವಿ

7

ಕಣ್ಣಿನ ಶಸ್ತ್ರ ಚಿಕಿತ್ಸೆ ಯಶಸ್ವಿ

Published:
Updated:

ಬೆಂಗಳೂರು: ಶಂಕರ ಕಣ್ಣಿನ ಆಸ್ಪತ್ರೆಯ ತಜ್ಞರ ತಂಡವು ದೃಷ್ಟಿದೋಷದಿಂದ ಬಳಲುತ್ತಿದ್ದ ಮಹಿಳೆಗೆ ‘ಟೂತ್‍ ಇನ್‍ ಐ’ ಎಂಬ ಶಸ್ತ್ರಚಿಕಿತ್ಸೆ ಮಾಡಿದೆ.

ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೈದ್ಯೆ ಪಲ್ಲವಿ ಜೋಶಿ , ‘ಕಾರ್ನಿಯಾ ಸಮಸ್ಯೆಯಿಂದಾಗಿ 35 ವರ್ಷದ ಮಮತಾ ದೃಷ್ಟಿ ಕಳೆದುಕೊಂಡಿದ್ದರು. 9 ತಿಂಗಳಲ್ಲಿ ಮೂರು ಹಂತಗಳಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿದೆವು. ಮಮತಾ ಅವರು ಶೇ 80ರಷ್ಟು ದೃಷ್ಟಿಯನ್ನು ಮರಳಿ ಪಡೆದಿದ್ದಾರೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry