ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೋಲ್‌ಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ

Last Updated 1 ಮಾರ್ಚ್ 2018, 19:51 IST
ಅಕ್ಷರ ಗಾತ್ರ

ನವದೆಹಲಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್‌ 8ರಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ನಗರ ಪ್ರದೇಶಕ್ಕೆ ಸಮೀಪವಿರುವ ಒಂದು ಟೋಲ್‌ನಲ್ಲಿ ಮಹಿಳಾ ಸಿಬ್ಬಂದಿ ನಿಯೋಜಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಮುಂದಾಗಿದೆ.

‘ಈ ಕ್ರಮ ಯಶಸ್ವಿಯಾದರೆ, ಮುಂದಿನ ಮೂರು ತಿಂಗಳಲ್ಲಿ ಎನ್‌ಎಚ್‌ಎಐದ ಎಲ್ಲ ಟೋಲ್‌ಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜಿಸಲಾಗುವುದು. ಈ ನಿಟ್ಟಿನಲ್ಲಿ ಪ್ರಾದೇಶಿಕ ಅಧಿಕಾರಿಗಳಿಗೆ ಸೂಚನೆ ನಿಡಲಾಗಿದೆ’ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.

ಟೋಲ್‌ಗಳ ಸ್ಥಿತಿಯನ್ನು ಸುಧಾರಿಸಲು ಮತ್ತು ಸ್ಪರ್ಧಾತ್ಮಕ ವಾತಾವರಣ ಸೃಷ್ಟಿಸಲು, ಎನ್ಎಚ್ಎಐ ವಿವಿಧ ಪ್ರಮಾಣಗಳನ್ನು ಆಧರಿಸಿ ಟೋಲ್‌ಗಳ ಶ್ರೇಣಿ ವರ್ಗೀಕರಣ ಮಾಡುತ್ತಿದೆ. ಟೋಲ್‌ಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳು, ಫಾಸ್ಟ್‌ ಟ್ಯಾಗ್‌ ಮಾರ್ಗ, ಶೌಚಾಲಯ ಲಭ್ಯತೆ ಮತ್ತಿತರ ಸೌಲಭ್ಯಗಳನ್ನು ಆಧರಿಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT