ಲಂಚ: ಇಬ್ಬರು ಕಸ್ಟಮ್ಸ್ ಅಧಿಕಾರಿಗಳ ಬಂಧನ

7

ಲಂಚ: ಇಬ್ಬರು ಕಸ್ಟಮ್ಸ್ ಅಧಿಕಾರಿಗಳ ಬಂಧನ

Published:
Updated:

ಬೆಂಗಳೂರು: ವಿದೇಶದಿಂದ ತಂದಿದ್ದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಿಡುಗಡೆ ಮಾಡಲು ₹ 30,000 ಲಂಚ ಪಡೆದ ಆರೋಪದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಇಬ್ಬರು ಕಸ್ಟಮ್ಸ್ ಅಧಿಕಾರಿಗಳನ್ನು ಸಿಬಿಐ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಕಸ್ಟಮ್ಸ್ ಸೂಪರಿಂಟೆಂಡೆಂಟ್ ಶಫಿಉಲ್ಲಾ, ಇನ್‌ಸ್ಪೆಕ್ಟರ್ ಅಭಿಷೇಕ್ ಕುಮಾರ್ ಬಂಧಿತರು. ತಿಪ್ಪಸಂದ್ರ ನಿವಾಸಿಯೊಬ್ಬರು ಎಲೆಕ್ಟ್ರಾನಿಕ್ ಉಪಕರಣಗಳನ್ನು ಬ್ಯಾಂಕಾಕ್‌ನಲ್ಲಿ ಖರೀದಿಸಿದ್ದರು. ಗುರುವಾರ ಬೆಳಗಿನ ಜಾವ ಬೆಂಗಳೂರಿಗೆ ಬಂದಿಳಿದಿದ್ದ ಇವರನ್ನು ತಡೆದು ಪರಿಶೀಲಿಸಿದ ಅಧಿಕಾರಿಗಳು, ಸರಕು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯನ್ನು ಇಟ್ಟಿದ್ದರು.

ಸರಕು ಅಲ್ಲಿಯೇ ಬಿಟ್ಟು ಸಿಬಿಐ ಕಚೇರಿಗೆ ತೆರಳಿದ ಮುತ್ತುಕೃಷ್ಣನ್ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು  ಕಾರ್ಯಾಚರಣೆ ನಡೆಸಿ ಇಬ್ಬ

ರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry